BREAKING NEWS

ಗೃಹ ಬಳಕೆ ಸಿಲಿಂಡರ್‌ ಬೆಲೆಯಲ್ಲಿ 200 ರೂ ಕಡಿತ

ನವದೆಹಲಿ : ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ.

ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ.

ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್‌ಪಿಜಿ ಸಿಲಿಂಡರ್‌ ದರವನ್ನು ಏರಿಸಿದ್ದವು. ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

lokesh

Recent Posts

ಹಸಿವಿನ ಆಳ ಮತ್ತು ಅನ್ನ ಎಂಬ ದೃಶ್ಯ ಕಾವ್ಯ…..

ಚಾಮರಾಜನಗರ ನೆಲದ ಕಲಾವಿದರು, ಅಲ್ಲಿನ ಆಡುಭಾಷೆಯನ್ನೇ ಜೀವಾಳವಾಗಿಸಿಕೊಂಡು ಗೆದ್ದ ಅನ್ನ ಚಲನಚಿತ್ರ ರಶ್ಮಿ ಕೋಟಿ ಮನೆಗೆ ಕರೆದುಕೊಂಡು ಹೋಗಲು ಬಂದ…

1 min ago

ತುಳು ಸಾಹಿತ್ಯ, ಸಂಸ್ಕೃತಿಗೆ ಕನ್ನಡ ಭಾಷಾ ಮೆರುಗು

ತುಳುನಾಡಿನಲ್ಲಿ ಹುಟ್ಟಿ ಬೆಳೆದ ಎಚ್. ನಾಗವೇಣಿಯವರ ಕತೆಗಳಲ್ಲಿ ಕೂಡ ಈ ತಾಯ್ನೆಲದ ಮಣ್ಣಿನ ತುಡಿತ ಮಿಡಿತಗಳು ನರನಾಡಿಯಂತೆ ವ್ಯಾಪಿಸಿರುತ್ತವೆ. ಆ…

14 mins ago

ಓದುಗರ ಪತ್ರ| ಎಲ್ಲ ವಿದ್ಯಾರ್ಥಿಗಳಿಗೂ ಸೌಲಭ್ಯ ನೀಡಿ

ಐಐಟಿ, ಐಐಎಂ, ಐಐಎಸ್‌ಪಿ, ಎನ್‌ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ. ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು…

43 mins ago

ಓದುಗರ ಪತ್ರ| ಉಪನ್ಯಾಸಕರ ನೇಮಕಾತಿಯಾಗಲಿ

ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳಲ್ಲಿ ಸುಮಾರು ನಾಲ್ಕು ಸಾವಿರದಷ್ಟು ಉಪನ್ಯಾಸಕ ಹುದ್ದೆಗಳು ಖಾಲಿ ಇದ್ದು, ಮುಖ್ಯಮಂತ್ರಿಗಳ ಅನುಮತಿ…

47 mins ago

ನಾಯಕರೇ ಸುಳ್ಳುಕೋರರಾದರೆ ಅನುಯಾಯಿಗಳು ಸತ್ಯವಂತರಾಗಲು ಹೇಗೆ ಸಾಧ್ಯ? ಮೋದಿಗೆ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜಕುಟುಂಬದ…

10 hours ago