ಬೆಂಗಳೂರು : ನಾನೆಲ್ಲೂ ಹೋಗಿಲ್ಲ ಇಲ್ಲೇ ಇದ್ದೀನಿ ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಎಂದು ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನದ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ನಾನು ಎಲ್ಲೂ ಹೋಗಿಲ್ಲ ಇಲ್ಲೇ ಇದ್ದೇನೆ. ನಾವು ಕಾನೂನಿನ ಪ್ರಕಾರ ಹೋರಾಟ ನಡೆಸುತ್ತೇವೆ ಎಂದರು.
ಇದೇನು ಮೊದಲಲ್ಲ, ಕಳೆದ ೪೦ ವರ್ಷದಿಂದ ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಪಕ್ಷ ಸಿಒಡಿ, ಲೋಕಾಯುಕ್ತ ಸೇರಿದಂತೆ ಅನೇಕ ತನಿಖೆಗಳನ್ನು ಎದುರಿಸಿಕೊಂಡು ಬಂದಿದ್ದೇವೆ ಎಂದರು.
ಕಾಂಗ್ರೆಸ್ ಪಕ್ಷದ ಆರೋಪಗಳ ಬಗ್ಗೆ ಮಾತನಾಡಿದ ಅವರು, ಸರ್ಕಾರ ಅವರದ್ದೇ ಇದೆ, ಎಸ್‌ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ಅವರು ಏನು ಬೇಕಾದರು ಮಾಡಲಿ. ಕಾನೂನು ರೀತಿ ಏನು ಬೇಕಾದರು ಕ್ರಮ ಕೈಗೊಳ್ಳಲಿ ಎಂದರು.
ಎಸ್‌ಐಟಿ ತನಿಖೆಯೆ ಯಾವುದೇ ರೀತಿಯ ಮುಜುಗರವಾಗಬಾರದು ಎಂಬ ಉದ್ದೇಶದಿಂದ ನಾನು ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು.
ತನಿಖೆಗೆ ಕರೆದಾಗ ಬರುತ್ತಾನೆ: ಎಫ್‌ಐಆರ್ ಮಾಡುತ್ತಾರೆ ಅಂತಾ ಪ್ರಜ್ವಲ್‌ಗೆನಾದರು ಗೊತ್ತಿತ್ತಾ? ಕೆಲಸದ ನಿಮಿತ್ತ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾನೆ. ತನಿಖೆಗೆ ಕರೆದಾಗ ಬರುತ್ತಾನೆ ಎಂದು ಹೆಚ್.ಡಿ.ರೇವಣ್ಣ ತಿಳಿಸಿದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…