ಬೆಂಗಳೂರು : ಕಂದಾಯ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೇವಲ ಎರಡೇ ತಿಂಗಳಲ್ಲಿ ಭೂ ಪರಿವರ್ತನೆ ಹಾಗೂ ನೋಂದಣಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲ ರೀತಿಯ ಭ್ರಷ್ಟಾಚಾರವನ್ನೂ ಕೊನೆಗೊಳಿಸಿ, ಆಡಳಿತ ಸುಧಾರಣೆ ನಿಟ್ಟಿನಲ್ಲಿ ಸಚಿವ ಕೃಷ್ಣಭೈರೇಗೌಡ ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ. ಅವರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಭೂ ಕಂದಾಯತಿದ್ದುಪಡಿ) ವಿಧೇಯಕ ಹಾಗೂ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲೂ ಮಂಡಿಸಿ ಚರ್ಚಿಸಲಾಯಿತು. ಈ ವೇಳೆ ಮಾತನಾಡಿದ ಮರಿತಿಬ್ಬೇಗೌಡ, “ನೋಂದಣಿ ಅಧಿಕಾರಿ ಒಳ್ಳೆಯ ವ್ಯಕ್ತಿಯೇ ಆಗಿದ್ದರೂ, ಜನ ಅನುಮಾನದಿಂದಲೇ ನೋಡುವಂತಾಗಿದೆ. ಇದಕ್ಕೆ ಕಾರಣ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ. ಈ ಭ್ರಷ್ಟಾಚಾರವನ್ನು ತಡೆದು ಜನರಿಗೆ ಸುಗಮ ಮತ್ತು ಸರಳ ಸೇವೆಯನ್ನು ಒದಗಿಸುವ ಸಲುವಾಗಿ ಸಚಿವ ಕೃಷ್ಣಭೈರೇಗೌಡ ತೆಗೆದುಕೊಂಡಿರುವ ಕ್ರಮ ಮತ್ತು ಸರ್ಕಾರದ ನಡೆ ನಿಜಕ್ಕೂ ಶ್ಲಾಘನೀಯ” ಎಂದು ಪ್ರಶಂಶಿಸಿದ್ದಾರೆ
“ಯಾರದ್ದೋ ಆಸ್ತಿಯನ್ನು ಮತ್ಯಾರೋ ತಮ್ಮ ಹೆಸರಿಗೆ ನೋಂದಣಿ ಮಾಡಿಕೊಳ್ಳುವ, ಇನ್ಯಾರಿಗೋ ಮಾರಾಟ ಮಾಡಿಕೊಳ್ಳುವ ದೊಡ್ಡ ಮೋಸದ ಜಾಲ ಇಂದು ರಾಜ್ಯಾದ್ಯಂತ ಸಕ್ರೀಯವಾಗಿದೆ. ಬೆಂಗಳೂರಿನಂತಹ ನಗರದಲ್ಲಿ ನೀವು ಒಂದು ವರ್ಷ ವಿದೇಶಕ್ಕೆ ಹೋಗಿ ಹಿಂತಿರುಗಿದರೆ, ವಾಪಾಸ್ ಬರುವ ವೇಳೆಗೆ ನಿಮ್ಮ ಭೂಮಿ ಮತ್ತೊಬ್ಬರಿಗೆ ನೋಂದಣಿಯಾಗಿರುತ್ತದೆ. ಈ ಮೋಸದ ಜಾಲದ ಹಿಂದೆ ಹಲವು ಅಧಿಕಾರಿಗಳ ಕೈವಾಡವೂ ಇದೆ.
ಆದರೆ, ಈ ವಂಚನೆಗೆ ಒಳಗಾದ ಆಸ್ತಿ ಮಾಲೀಕರು ತನ್ನ ಜೀವಿತಾವಧಿಯ ಕೊನೆವರೆಗೂ ಸಿವಿಲ್ ನ್ಯಾಯಾಲಯಗಳ ಮೆಟ್ಟಿಲು ಹತ್ತಿಳಿದರೂ ತ್ವರಿತ ನ್ಯಾಯದ ಆಶ್ವಾಸನೆ ನೀಡಲು ಸಾಧ್ಯವಿಲ್ಲದಂತಾಗಿದೆ. ಅಂತಹ ಜನರಿಗೆ ತ್ವರಿತ ನ್ಯಾಯ ಒದಗಿಸಲು ಮತ್ತು ಭ್ರಷ್ಟ ಅಧಿಕಾರಿಗಳನ್ನು ಕಾನೂನು ಅಡಿ ಶಿಕ್ಷಿಸಲು, ಭ್ರಷ್ಟಾಚಾರವನ್ನು ನಿಯಂತ್ರಿಸಲು ಈ ತಿದ್ದುಪಡಿ ವಿಧೇಯಕ ಉಪಯೋಗವಾಗುತ್ತದೆ” ಎಂದು ಮರಿತಿಬ್ಬೇಗೌಡ ಅಭಿಮತ ವ್ಯಕ್ತಪಡಿಸಿದರು. ಅಲ್ಲದೆ, ಕಂದಾಯ ಇಲಾಖೆ ಆಡಳಿತದಲ್ಲಿ ಮತ್ತಷ್ಟು ಸುಧಾರಣೆ ಆಗಬೇಕು ಎಂದು ಸಲಹೆ ನೀಡಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…