BREAKING NEWS

ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ : ಹೆಚ್‌.ಡಿ.ಕೆ ಗೆ ಮಾಜಿ ಶಾಸಕ ಯತೀಂದ್ರ ಸವಾಲ್

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ವಿಷಯದಲ್ಲಿ ಯಾವುದೇ ದಂಧೆ ನಡೆಯುತ್ತಿಲ್ಲ. ಆಧಾರ ರಹಿತ ಆರೋಪ ಮಾಡಬಾರದು, ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ ಎಂದು ಮಾಜಿ ಶಾಸಕ ಯತೀಂದ್ರ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿದೆ. ಈ ಮೊದಲು ಬಿಜೆಪಿಯವರು ಕೊಟ್ಟ ಯಾವ ಭರವಸೆಗಳನ್ನೂ ಈಡೇರಿಸಿರಲಿಲ್ಲ. ಕಾಂಗ್ರೆಸ್‍ನವರು ಅದೇ ರೀತಿ ಮಾಡುತ್ತಾರೆ ಎಂದುಕೊಂಡಿದ್ದರು ಎಂದು ಹೇಳಿದರು.

ಆದರೆ ನಮ್ಮ ಸರ್ಕಾರ ಹಂತಹಂತವಾಗಿ ಒಂದೊಂದೆ ಗ್ಯಾರಂಟಿಗಳನ್ನು ಈಡೇರಿಸುತ್ತಿದೆ. ಇದರಿಂದ ಹತಾಶರಾಗಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆಂದು ಅಸಾಮಾಧನ ವ್ಯಕ್ತಪಡಿಸಿದರು.ಈ ಹಿಂದೆಯೂ ಕೂಡ ಕುಮಾರಸ್ವಾಮಿಯವರು ಸಾಕಷ್ಟು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಡಿ.ಕೆ.ರವಿ ಅವರ ಅಸಹಜ ಸಾವಾದಾಗ ಮುಖ್ಯಮಂತ್ರಿಯಾಗಿದ್ದ ತಮ್ಮ ತಂದೆ ಸಿದ್ದರಾಮಯ್ಯ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ನೋಡಲು ಹೋಗಿದ್ದರು. ಆಗ ಫೋರೆನ್ಸಿಕ್ ವರದಿ ತಿರುಚಲು ಹೋಗಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು ಎಂದು ಹೇಳಿದರು.

ವರ್ಗಾವಣೆ ದಂಧೆ ನಡೆಯುತ್ತಿದೆ. ಯತೀಂದ್ರ ಅವರಿಗೆ ಸೇರಿದ ಆಡಿಯೋ ಸಾಕ್ಷಿ ಇದೆ ಎಂಬೆಲ್ಲಾ ವದಂತಿಗಳ ಬಗ್ಗೆ ಪ್ರಶ್ನಿಸಿದಾಗ ಅಸಮಾಧನ ವ್ಯಕ್ತಪಡಿಸಿದ ಯತೀಂದ್ರ ಅವರು ಯಾರ ಆಡಿಯೋ ಧೈರ್ಯ ಇದ್ದರೆ ಬಿಡುಗಡೆ ಮಾಡಲು ಹೇಳಿ, ನನ್ನದಂತೂ ಆಡಿಯೋ ಇಲ್ಲ. ಯಾವ ವರ್ಗಾವಣೆ ದಂಧೆಯೂ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

lokesh

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

2 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

7 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

7 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

7 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

7 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

7 hours ago