ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್; ಕೆಪಿಸಿಸಿ ನಡೆಯನ್ನು ಟೀಕಿಸಿದ ಎಂಪಿ ರೇಣುಕಾಚಾರ್ಯ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ ಆಗಸ್ಟ್ 31 ರಂದು ನಡೆಸಲಾಗಿತ್ತು. ಅದೇ ದಿನ ವಲ್ಲಭಬಾಯ್ ಪಟೇಲ್ ಜನ್ಮದಿನಾಚರಣೆ ಕಾರ್ಯಕ್ರಮವಿತ್ತು. ಆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ನಡೆದ ಸಂಭಾಷಣೆ ಇದೀಗ ಸುದ್ದಿ ಆಗಿದೆ. ಈ ಬಗ್ಗೆ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್! ಕರ್ಮಕಥೆ ಎಂದು ಸಿಎಂ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದಿರಾಗಾಂಧಿ ಪುಣ್ಯಸ್ಮರಣೆ ಮಾತ್ರ ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ವಲ್ಲಭಬಾಯ್ ಪಟೇಲ್ ಪೋಟೋ ಇಡಲು ಸೂಚನೆ ನೀಡಿದ್ದರು. ಈ ಬಗ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಗುಸುಗುಸು ಚರ್ಚೆ ಮಾಡಿಕೊಂಡಿದ್ದರು.

ನಾವು ಪುಣ್ಯಸ್ಮರಣೆ ಮಾತ್ರ ಮಾಡುತ್ತೇವೆ ಆದ್ರ ಜನ್ಮಾಚರಣೆ ಮಾಡಲ್ಲ ಎಂದು ಶಿವಕುಮಾರ್ ಹೇಳಿದ್ದರು. ಇಲ್ಲ ಬಿಜೆಪಿಯರು ಅದನ್ನೇ ದೊಡ್ಡದಾಗಿ ಮಾಡ್ತಾರೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು. ಈ ವೇಳೆ ಸಿಬ್ಬಂದಿ ವಲ್ಲಭಬಾಯ್ ಪಟೇಲ್ ಪೋಟೋ ಇಟ್ಟಿದ್ದಾರೆ. ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್! ನವರ ಕರ್ಮಕಥೆ ಎಂದು ಈ ವಿಚಾರವನ್ನು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

× Chat with us