ಬೆಂಗಳೂರು: ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಪ್ರಾರಂಭಕ್ಕೆ ಅನುಮತಿ ದೊರಕಿಸಿಕೊಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಭರವಸೆ ನೀಡಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಮಂಗಳವಾರ ಬೌದ್ಧ ಗುರುಗಳ ನಿಯೋಗದಿಂದ ಮನವಿ ಸ್ವೀಕರಿಸಿದ ಸಚಿವರು, “ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಮತ್ತು ಚುನಾವಣಾ ಗುರುತಿನ ಚೀಟಿ ಪಡೆಯಲು ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು” ಎಂದು ಹೇಳಿದರು.
ಮೈಸೂರಿನ ಮೂಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನಕ್ಕಾಗಿ ಮನವಿ ಸಲ್ಲಿಸಿರುವ ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಚೋದ್ದಿ ತಾಶಿ ಲುಮ್ಪೋ’ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ನಿಯೋಗ ಮನವಿ ಮಾಡಿತು.
500 ಬೌದ್ಧ ಗುರುಗಳು ಈ ಸೊಸೈಟಿಯಲ್ಲಿ ಇದ್ದು, ಬಿಹಾರದ ಬೋದ್ ಗಯಾ ಕೇಂದ್ರದ ಜತೆಗೂಡಿ ಕೆಲಸ ಮಾಡುತ್ತಿದೆ ಎಂದು ತಿಳಿಸಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವ ಭರವಸೆ ನೀಡಿದರು.
ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ನಿಮ್ಮ ಸಮುದಾಯದ ಸಮಸ್ಯೆ ಪರಿಹಾರಕ್ಕೆ ಅನುಕೂಲವಾಗುತ್ತದೆ. ಆ ಬಗ್ಗೆ ಗಮನ ಹರಿಸಲಾಗುವುದು. ಒಂದು ವರ್ಷದಲ್ಲಿ ನಿಮ್ಮೆಲ್ಲ ಬೇಡಿಕೆ ಈಡೇರಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…