BREAKING NEWS

ಶೀಘ್ರ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ: ಆಯನೂರು ಮಂಜುನಾಥ್

ಶಿವಮೊಗ್ಗ: ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತದಿಂದ ಶೀಘ್ರ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಲ್ಲಿ ನನಗೆ ಅವಕಾಶ ಸಿಗುವ ಸಾಧ್ಯತೆ ಇಲ್ಲ. ಆದರೂ ಕಣದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ ಅವರು, ಕಾಂಗ್ರೆಸ್ ಸೇರುವ ವಿಚಾರದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದರು.

ಈಶ್ವರಪ್ಪ ಹಾಗೂ ಅವರ ಪುತ್ರ ಯಾರೇ ನಿಂತರೂ ಸ್ಪರ್ಧೆ ಮಾಡುವೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಕಣಕ್ಕೆ ಇಳಿಯಬೇಕೆಂಬ ಕಾರಣಕ್ಕೆ ನನ್ನ‌ ಭಾವನೆಯನ್ನ ಈ ಹಿಂದೆ ಪ್ರಕಟಿಸಿದ್ದೇನೆ. ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದೆ. ಅದರೆ ಪಕ್ಷದಿಂದ ನನಗೆ ಟಿಕೆಟ್ ಸಿಗುವ ಲಕ್ಷಣಗಳು ಕಾಣುತ್ತಿಲ್ಲ ಎಂದರು.

ಬಿಜೆಪಿ ಪಕ್ಷದ ಬಗ್ಗೆ ನನಗೆ ಆಕ್ಷೇಪವಿಲ್ಲ. ಆದರೆ ನಾಯಕರ ವಿರುದ್ಧವಿದೆ. ಬಿ.ಎಸ್.ಯಡಿಯೂರಪ್ಪ ಪುತ್ರರನ್ನ‌ ರಾಜಕೀಯಕ್ಕೆ ಕರೆತಂದಾಗ ವಿರೋಧಿಸಿದ್ದ ಈಶ್ವರಪ್ಪ ಈಗ ತಮ್ಮ ಮಗನನ್ನ‌ ಚುನಾವಣೆ ರಾಜಕೀಯಕ್ಕೆ ಕರೆತರುವ ಪ್ರಯತ್ನ ಮಾಡುತ್ತಿರುವುದು ಏಕೆ ಎಂದು ವಾಗ್ದಾಳಿ ನಡೆಸಿದರು.

andolanait

Recent Posts

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

1 hour ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

1 hour ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

2 hours ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

2 hours ago

ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು ; 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…

3 hours ago

ಹೊಗೇನಕಲ್‌ : ನೀರಿನ ಸೆಳೆತಕ್ಕೆ ಸಿಲುಕಿ ಓರ್ವ ಸಾವು

ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…

3 hours ago