ನವದೆಹಲಿ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.
ಕಳೆದ ವರ್ಷ ಏಕನಾಥ ಶಿಂದ ನೇತೃತ್ವದಲ್ಲಿ ಶಿವಸೇನೆಯ ಶಾಸಕರು ಬಂಡಾಯ ಎದ್ದು, ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಈ ಪ್ರಕರಣ ಸಂಬಂಧ ಏಕಷಾಥ ಶಿಂಧೆ ಹಾಗೂ 15 ಶಾಸಕರನ್ನು ಅನರ್ಹಗೊಳಿಸಬೇಕು ಎಂದು, ಮಹಾವಿಕಾಸ ಆಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಬೇಕು ಎಂದು ಕೋರಿ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಗುರುವಾರ ಪ್ರಕರಣ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಉದ್ಧವ್ ಠಾಕ್ರೆ ವಿಶ್ವಾಸಮತ ಸಾಬೀತು ಪಡಿಸದೆ ರಾಜೀನಾಮೆ ನೀಡಿದ್ದರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗದು ಎಂದು ಹೇಳಿದೆ.
ಅಲ್ಲದೇ ಉದ್ಧವ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ನಿರ್ಧಾರಕ್ಕೆ ಬಂದಿದ್ದು ಹಾಗೂ ಬಹುಮತ ಸಾಬೀತಿಗೆ ಸೂಚಿಸಿದ ನಿರ್ಧಾರ ತಪ್ಪು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್ ಬ್ಯಾಂಡ್‌ನ ಸದ್ದಿನೊಂದಿಗೆ…
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…