ಹುಬ್ಬಳ್ಳಿ : ನೂತನ ಸಂಸತ್ ಭವನ ವಿಚಾರವಾಗಿ ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಚಿಲ್ಲರೆ ರಾಜಕಾರಣ ಮಾಡುವುದು ಕಾಂಗ್ರೆಸ್‌ನ ಡಿಎನ್‌ಎನಲ್ಲಿಯೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿಂದು ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೂತನ ಸಂಸತ್ ಭವನ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದಲಿತರೆಂಬ ಕಾರಣಕ್ಕೆ ಆಹ್ವಾನಿಸಲಿಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರು ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಏಕೆ ಬೆಂಬಲ ನೀಡಿರಲಿಲ್ಲ? ಸೋಲುತ್ತೇವೆಂದು ಗೊತ್ತಿದ್ದರೂ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ಅದು ಚಿಲ್ಲರೆ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಆಧುನಿಕ ವ್ಯವಸ್ಥೆಗೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ಆದರೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ನೂತನ ಸಂಸತ್ ಭವನವನ್ನು ಮೋದಿ ಮಲ್ಟಿಫ್ಲೆಕ್ಸ್ ಎಂದು ಕೇವಲವಾಗಿ ಹೇಳಿಕೆ ನೀಡಿದ್ದಾರೆ. ವಿಶ್ವವೇ ಈ ಭವನ ಮೆಚ್ಚಿಕೊಳ್ಳುತ್ತಿದೆ, ಒಳ್ಳೆಯ ಕೆಲಸವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಅವರ ಕೆಳಮಟ್ಟದ ಮನಸ್ಥಿತಿ ಏನೆಂಬುದು ಇದರಿಂದ ಅರ್ಥವಾಗುತ್ತದೆ. ಜನರೇ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದಿದ್ದಾರೆ.
2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾತಿಗಣತಿ ಮಾಡಲಿಲ್ಲ. ಆದರೀಗ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡುತ್ತಿದ್ದಾರೆ. ಅತಿವೃಷ್ಟಿ , ಅನಾವೃಷ್ಟಿಯಾದರೂ ಪ್ರಧಾನಿ ಮೋದಿ ಅವರನ್ನು ತೆಗಳುತ್ತಾರೆ. ಅವರ ಜನಪ್ರಿಯತೆ ಸಹಿಸಿಕೊಳ್ಳಲಾಗದೇ ಕನಸಲ್ಲೂ ನೆನಪು ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ನೀಡಿ 33% ಮಹಿಳಾ ಮೀಸಲಾತಿ ಕಲ್ಪಿಸಲಾಗುತ್ತದೆ. ಕಾಂಗ್ರೆಸ್ ಈ ಹಿಂದೆಯೂ ಮೀಸಲಾತಿ ಕಲ್ಪಿಸಿಲ್ಲ, ಮುಂದೆಯೂ ಕಲ್ಪಿಸುವುದಿಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಹಿಳಾ ಮೀಸಲಾತಿ ಜಾರಿ 100% ಖಚಿತ, ಆದ್ರೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಅಷ್ಟೇ ಎಂದು ಹೇಳಿದ್ದಾರೆ.
ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…