Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು ಈ ರೀತಿಯಲ್ಲ : ಶೆಟ್ಟರ್ ಬೇಸರ

ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು.
ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಪೋನ್ ಮಾಡಿದ್ದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಪಕ್ಷದ ದೃಷ್ಟಿಯಿಂದ ಎಲ್ಲಾ ಒಳ್ಳೆಯದು ಆಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪನವರನ್ನು ಭೇಟಿಯಾಗಬೇಕಿತ್ತು. ವಿಮಾನ ತಡವಾಗಿದ್ದರಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಗೆ ಹೋಗಿ ಬಂದ ನಂತರ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ ಎಂದರು.

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಅಲ್ಲದೇ ಕಳೆದ ಎರಡು ವರ್ಷದಿಂದ ಯಾವುದೇ ಸ್ಥಾನಮಾನ ಇಲ್ಲ. ಶಾಸಕನಾಗಿ ಕೆಲಸ ಮಾಡಿಕೊಂಡಿದ್ದೆ. ಸಕಾರಣ ಇಲ್ಲದೆ ಟಿಕೆಟ್ ನಿರಾಕರಣೆ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ ಬಳಿಕ ಮುಂದೇನಾಗುತ್ತೊ ನೋಡೋಣ ಎಂದು ಹೇಳಿದರು.

ಯಾವುದೇ ಕಾರಣವಿಲ್ಲದೇ ನಾನು ನಿವೃತ್ತಿ ಘೋಷಣೆ ಮಾಡಲು ಸಿದ್ಧನಿದ್ದೇನೆ. ಆದರೆ, ರಾಜಕಾರಣದಲ್ಲಿ ಗೌರವಯುತವಾಗಿ ಹೊರಗೆ ಹೋಗಬೇಕು ಎಂಬುದು ನನ್ನ ಅಭಿಪ್ರಾಯ. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ