BREAKING NEWS

ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು ಈ ರೀತಿಯಲ್ಲ : ಶೆಟ್ಟರ್ ಬೇಸರ

ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು.
ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಪೋನ್ ಮಾಡಿದ್ದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಪಕ್ಷದ ದೃಷ್ಟಿಯಿಂದ ಎಲ್ಲಾ ಒಳ್ಳೆಯದು ಆಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯಡಿಯೂರಪ್ಪನವರನ್ನು ಭೇಟಿಯಾಗಬೇಕಿತ್ತು. ವಿಮಾನ ತಡವಾಗಿದ್ದರಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಗೆ ಹೋಗಿ ಬಂದ ನಂತರ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ ಎಂದರು.

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಅಲ್ಲದೇ ಕಳೆದ ಎರಡು ವರ್ಷದಿಂದ ಯಾವುದೇ ಸ್ಥಾನಮಾನ ಇಲ್ಲ. ಶಾಸಕನಾಗಿ ಕೆಲಸ ಮಾಡಿಕೊಂಡಿದ್ದೆ. ಸಕಾರಣ ಇಲ್ಲದೆ ಟಿಕೆಟ್ ನಿರಾಕರಣೆ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ ಬಳಿಕ ಮುಂದೇನಾಗುತ್ತೊ ನೋಡೋಣ ಎಂದು ಹೇಳಿದರು.

ಯಾವುದೇ ಕಾರಣವಿಲ್ಲದೇ ನಾನು ನಿವೃತ್ತಿ ಘೋಷಣೆ ಮಾಡಲು ಸಿದ್ಧನಿದ್ದೇನೆ. ಆದರೆ, ರಾಜಕಾರಣದಲ್ಲಿ ಗೌರವಯುತವಾಗಿ ಹೊರಗೆ ಹೋಗಬೇಕು ಎಂಬುದು ನನ್ನ ಅಭಿಪ್ರಾಯ. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು ಎಂದರು.

lokesh

Recent Posts

ಬೊಮ್ಮೇನಹಳ್ಳಿ ಬಡಾವಣೆ ರಚನೆ; ರೈತರಿಗೆ ಓಪನ್ ಆಫರ್

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-೧ ನಗರಪಾಲಿಕೆಯನ್ನಾಗಿ ರಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡ ಬೆನ್ನಲ್ಲೇ ಹೊರವಲಯದಲ್ಲಿ…

12 seconds ago

ಕಬಿನಿ ಹಿನ್ನೀರಿನಲ್ಲಿ ಹೆಚ್ಚಿದ ಬೋಟ್ ಸಫಾರಿ

ಮಂಜು ಕೋಟೆ ಅರಣ್ಯದೊಳಗಿನ ಸಫಾರಿಗೆ ನಿರ್ಬಂಧ ಹೇರಿದ ಬಳಿಕ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್‌ನವರ ಕಸರತ್ತು  ಎಚ್.ಡಿ.ಕೋಟೆ: ಅರಣ್ಯದಲ್ಲಿ ಈಗ ಸಫಾರಿ…

6 mins ago

ಸಹಕಾರಿಗಳ ಪಾಲಿನ ಸಂಜೀವಿನಿ ‘ಯಶಸ್ವಿನಿ’ ಯೋಜನೆ ಮರು ಜಾರಿ

ಗಿರೀಶ್ ಹುಣಸೂರು ೨೦೨೬ರ ಜ.೩ರಿಂದ ಮಾ.೩೧ರವರೆಗೆ ನೋಂದಣಿ ಪ್ರಕ್ರಿಯೆ ಮೈಸೂರು: ಸಹಕಾರ ಸಂಘಗಳ ಸದಸ್ಯರ ಪಾಲಿನ ಸಂಜೀವಿನಿಯಂತಿರುವ ‘ಯಶಸ್ವಿನಿ’ ಆರೋಗ್ಯ…

11 mins ago

‘ನೈಸರ್ಗಿಕ ಬೇಸಾಯ ನಂಬಿ ಕೆಟ್ಟವರಿಲ್ಲʼ

ನೈಸರ್ಗಿಕ ಕೃಷಿ ರೂವಾರಿ ಸುಭಾಷ್ ಪಾಳೇಕರ್ ಸ್ಪಷ್ಟನುಡಿ ಸಂದರ್ಶನ: ರಶ್ಮಿ ಕೋಟಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…

17 mins ago

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…

13 hours ago