ಭೋಪಾಲ್ : ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಅವರು ಲಂಚವಾಗಿ ಸ್ವೀಕರಿಸಿದ 5,000 ರೂ. ಹಣವನ್ನು ಜಗಿದು ನುಂಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಿಯೋಜಿಸಲಾಗಿದ್ದ ಕಂದಾಯ ಇಲಾಖೆಯ ಅಧಿಕಾರಿ ಗಜೇಂದ್ರ ಸಿಂಗ್ ಲಂಚದ ಹಣವನ್ನು ಜಗಿದು ನುಂಗಿರುವ ವ್ಯಕ್ತಿ. ಭೂ ಪ್ರಕರಣದ ದೂರುದಾರರಾದ ಚಂದನ್ ಸಿಂಗ್ ಲೋಧಿ ಅವರಿಗೆ ಗಜೇಂದ್ರ ಸಿಂಗ್ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಲೋಧಿ ಲೋಕಾಯುಕ್ತ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿದ ಜಬಲ್ಪುರದ ಲೋಕಾಯುಕ್ತ ಪೊಲೀಸರ ತಂಡ ಗಜೇಂದ್ರ ಸಿಂಗ್ ಖಾಸಗಿ ಕಚೇರಿಗೆ ತಲುಪಿದೆ. ಗಜೇಂದ್ರ ಸಿಂಗ್ ಲೋಧಿ ಅವರಿಂದ ಲಂಚವನ್ನು ಸ್ವೀಕರಿಸುತ್ತಲೇ ದಾಳಿ ನಡೆಸಿ ಕಂದಾಯ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಆದರೆ ಈ ವೇಳೆ ಗಜೇಂದ್ರ ಸಿಂಗ್ ತಾನು ಸ್ವೀಕರಿಸಿದ 5,000 ರೂ. ಮೊತ್ತದ ಲಂಚವನ್ನು ಜಗಿದು ನುಂಗಿದ್ದಾರೆ. ತಕ್ಷಣವೇ ಗಜೇಂದ್ರ ಸಿಂಗ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸಾಕಷ್ಟು ಪ್ರಯತ್ನಗಳ ನಂತರ ಲಂಚದ ನೋಟುಗಳನ್ನು ಅವರ ಬಾಯಿಯಿಂದ ತಿರುಳಿನ ರೂಪದಲ್ಲಿ ಹೊರತೆಗೆಯಲಾಗಿದೆ. ಸದ್ಯ ಗಜೇಂದ್ರ ಸಿಂಗ್ ಆರೋಗ್ಯ ಸ್ಥಿರವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…
ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…