ರಾಯಚೂರು : ಜಿ-20 ಶೃಂಗಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪೋಷಕರು ಭಾರತದಲ್ಲೇ ಉಳಿದುಕೊಂಡಿದ್ದು ರಾಯರ ದರ್ಶನ ಪಡೆದಿದ್ದಾರೆ.
ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಇವರೊಂದಿಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ಬೀಗತಿಯಾಗಿರುವ ಸುಧಾಮೂರ್ತಿ ಅವರು ಕೂಡ ಜೊತೆ ಆಗಮಿಸಿದ್ದರು. ಮೊದಲು ರಾಯರ ದರ್ಶನ ಪಡೆದು, ಬಳಿಕ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶಿರ್ವಾದ ಪಡೆದರು. ಸುಧಾಮೂರ್ತಿ ಹಾಗೂ ರಿಷಿ ಸುನಕ್ ಪೋಷಕರಿಗೆ ಶ್ರೀಗಳು ಆಶಿರ್ವಚನ ಮಾಡಿದರು. ನಂತರ ಪರಿಮಳ ಪ್ರಸಾದ ಹಾಗೂ ಮಂತ್ರಾಕ್ಷತೆ ನೀಡಿ ಆಶಿರ್ವದಿಸಿದ್ದು,ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಮಂತ್ರಾಕ್ಷತೆ, ಪರಿಮಳ ಪ್ರಸಾದ ತಲುಪಿಸಲು ತಿಳಿಸಿದರು.
ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಜೊತೆ ರಿಷಿ ಸುನಾಕ್ ಅವರ ತಂದೆ-ತಾಯಿ ಕೂಡ ಭಾರತಕ್ಕೆ ಬಂದಿದ್ದಾರೆ. ಸದ್ಯ ರಿಷಿ ಸುನಾಕ್ ಅವರ ಕುಟುಂಬ ಆಧ್ಯಾತ್ಮಿಕತೆಯಲ್ಲಿ ತೊಡಗಿಕೊಳ್ಳುತ್ತಿದ್ದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.
ಶೃಂಗಸಭೆ ವೇಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದ ರಿಷಿ ಸುನಕ್ ದಂಪತಿ ಫೋಟೋಗಳು ವೈರಲ್ ಆಗಿದ್ದವು. ಬಳಿಕ ರಿಷಿ ಸುನಾಕ್ ಅವರ ತಾಯಿ ಉಷಾ ಸುನಕ್ ಅವರು ತಮ್ಮ ಬೀಗತಿ ಸುಧಾಮೂರ್ತಿ ಅವರೊಂದಿಗೆ ಬೆಂಗಳೂರಿನ ಶಾಸಕ ಉದಯ ಗರುಡಾಚಾರ್ ಅವರ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗಿಯಾಗಿದ್ದು ಜನರ ಮೆಚ್ಚುಗೆಗೆ ಕಾರಣವಾಗಿತ್ತು. ಇದೀಗ ರಿಷಿ ಸುನಾಕ್ ಅವರ ಪೋಷಕರು ಮಂತ್ರಾಲಯದ ರಾಯರ ದರ್ಶನ ಮಾಡಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…