BREAKING NEWS

ಅಪಾಯಕಾರಿ ಅಂಶ ಪತ್ತೆ : 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್‌ ಜಪ್ತಿ

ಮೈಸೂರು : ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ.

ಜುಲೈ 15ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದು ದೃಢವಾಗಿದ್ದು, ಬಿಯರ್‌ನಲ್ಲಿರುವ ಸೆಡಿಮೆಂಟ್ ಎಂಬ ಅಂಶ ದೇಹಕ್ಕೆ ಅಪಾಯಕಾರಿ ಎಂಬುದು ಲ್ಯಾಬ್‌ನಲ್ಲಿ ದೃಢವಾಗಿದೆ. ವಿವಿಧ ಕೆಎಸ್‌ಬಿಸಿಎಲ್ ಹಾಗೂ ಆರ್‌ವಿಬಿ ಸನ್ನದುದಾರರಿಗೆ ಈ ಬಿಯರ್ ಅನ್ನು ಸಾಗಣೆ ಮಾಡಲಾಗಿದೆ. ಈ ಮದ್ಯವನ್ನು ಅಂಗಡಿಗಳಿಗೆ ವಿತರಣೆ ಮಾಡದಂತೆ ಸೂಚನೆ ನೀಡಲಾಗಿದ್ದು, ಬಿಯರ್ ವಿತರಣೆ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ.

ಲ್ಯಾಬ್ ವರದಿಯಲ್ಲಿ ಅಪಾಯಕಾರಿ ಅಂಶ ದೃಢವಾದ ಹಿನ್ನೆಲೆ ಎಲ್ಲಾ ಬಿಯರ್ ಅನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ನಂಜನಗೂಡಿನ ಯುನೈಟೆಡ್ ಬ್ರಿವರಿಸಿಸ್ ಕಂಪನಿ ಘಟಕದಲ್ಲಿ ತಯಾರಿಸಿದ್ದ ಬಿಯರ್ ಇದಾಗಿದ್ದು, ಈ ಬಗ್ಗೆ ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಜುಲೈ 15 ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಈ ಅಂಶ ಪತ್ತೆಯಾಗಿದೆ. ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಆಗಸ್ಟ್ 2ರಂದು ಕೆಮಿಕಲ್ ವರದಿ ಬಂದಿದೆ. ವರದಿಯಲ್ಲಿ ಈ ಬಿಯರ್ ಮಾನವ ಬಳಕೆಗೆ ಯೋಗ್ಯವಲ್ಲ ಎಂದು ತಿಳಿಸಿದೆ ಎಂದರು.

ಹೀಗಾಗಿ ಒಟ್ಟು 78,678 ಬಾಕ್ಸ್ ಬಿಯರ್ ಅನ್ನು ಜಪ್ತಿ ಮಾಡಲಾಗಿದೆ. ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ಇದು ವಿತರಣೆಯಾಗಿತ್ತು. ರಿಟೇಲ್‌ನಲ್ಲಿ ಮಾರಾಟವಾಗದಂತೆ ಆಗದಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

lokesh

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

9 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

10 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

12 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

16 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

16 hours ago