Mysore
32
few clouds

Social Media

ಬುಧವಾರ, 01 ಏಪ್ರಿಲ 2026
Light
Dark

ಇಸ್ರೇಲ್ ಮೇಲೆ ರಾಕೆಟ್ ದಾಳಿ : ಯುದ್ಧ ಘೋಷಣೆ

ಟೆಲ್‌ ಅವಿವ್ : ಹಮಾಸ್ ಉಗ್ರರ ನಿಯಂತ್ರಣದಲ್ಲಿರುವ ಗಾಜಾಪಟ್ಟಿಯಿಂದ ಇಸ್ರೇಲ್ ಮೇಲೆ ಬರೋಬ್ಬರಿ 5,000 ರಾಕೆಟ್ ದಾಳಿ ಮಾಡಲಾಗಿದ್ದು, ಇದೀಗ ಇಸ್ರೇಲ್ ಯುದ್ಧದ ಘೋಷಣೆ ಮಾಡಿದೆ.

ಶನಿವಾರ ಮುಂಜಾನೆ ಗಾಜಾಪಟ್ಟಿಯಿಂದ 5,000 ರಾಕೆಟ್‌ಗಳ ದಾಳಿ ನಡೆಸಲಾಗಿದ್ದು, ಹಮಾಸ್ ಬಂಡುಕೋರರು ಇಸ್ರೇಲ್ ಗಡಿಯೊಳಗೆ ನುಗ್ಗಿದ್ದಾರೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ಘೋಷಿಸಿದ್ದಾರೆ.

ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲಿಯೇ ಭದ್ರತಾ ಮುಖ್ಯಸ್ಥರ ಸಭೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ತನ್ನ ಕೃತ್ಯಗಳಿಗಾಗಿ ಹಮಾಸ್ ಭಾರೀ ಬೆಲೆ ತೆರಬೇಕಾಗಲಿದೆ ಎಂದು ನೆತನ್ಯಾಹು ಸರ್ಕಾರ ಎಚ್ಚರಿಕೆ ನೀಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!