ಟೆಲ್ ಅವಿವ್ : ಹಮಾಸ್ ಉಗ್ರರ ನಿಯಂತ್ರಣದಲ್ಲಿರುವ ಗಾಜಾಪಟ್ಟಿಯಿಂದ ಇಸ್ರೇಲ್ ಮೇಲೆ ಬರೋಬ್ಬರಿ 5,000 ರಾಕೆಟ್ ದಾಳಿ ಮಾಡಲಾಗಿದ್ದು, ಇದೀಗ ಇಸ್ರೇಲ್ ಯುದ್ಧದ ಘೋಷಣೆ ಮಾಡಿದೆ.
ಶನಿವಾರ ಮುಂಜಾನೆ ಗಾಜಾಪಟ್ಟಿಯಿಂದ 5,000 ರಾಕೆಟ್‌ಗಳ ದಾಳಿ ನಡೆಸಲಾಗಿದ್ದು, ಹಮಾಸ್ ಬಂಡುಕೋರರು ಇಸ್ರೇಲ್ ಗಡಿಯೊಳಗೆ ನುಗ್ಗಿದ್ದಾರೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ಘೋಷಿಸಿದ್ದಾರೆ.
ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ.
ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲಿಯೇ ಭದ್ರತಾ ಮುಖ್ಯಸ್ಥರ ಸಭೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ತನ್ನ ಕೃತ್ಯಗಳಿಗಾಗಿ ಹಮಾಸ್ ಭಾರೀ ಬೆಲೆ ತೆರಬೇಕಾಗಲಿದೆ ಎಂದು ನೆತನ್ಯಾಹು ಸರ್ಕಾರ ಎಚ್ಚರಿಕೆ ನೀಡಿದೆ.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…