ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌: ಕೊಹ್ಲಿ ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ರೋಹಿತ್‌

ದುಬೈ: ಭಾರತದ ಕ್ರಿಕೆಟಿಗ ರೋಹಿತ್‌ ಶರ್ಮ ಅವರು ಐಸಿಸಿ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಐದನೇ ಸ್ಥಾನಕ್ಕೇರಿದ್ದಾರೆ.

ರೋಹಿತ್‌ ಅವರು ವಿರಾಟ್‌ ಕೊಹ್ಲಿ ಅವರನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೆ ಬಂದಿದ್ದಾರೆ. ಕೊಹ್ಲಿ 6ನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್‌ ಎದುರಿನ ಮೂರನೇ ಟೆಸ್ಟ್ ಪಂದ್ಯದ ಎರಡು ಇನಿಂಗ್ಸ್‌ಗಳಲ್ಲಿ ಕ್ರಮವಾಗಿ 19 ಮತ್ತು 59 ರನ್ ಗಳಿಸಿದ ರೋಹಿತ್ ರ‍್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಬಡ್ತಿ ಪಡೆದಿದ್ದಾರೆ.
ಚೇತೇಶ್ವರ್ ಪೂಜಾರ ಮೂರು ಸ್ಥಾನ ಏರಿಕೆ ದಾಖಲಿಸಿ 15ನೇ ಸ್ಥಾನಕ್ಕೆ ತಲುಪಿದ್ದಾರೆ. ಅವರಿಗಿಂತ ವಿಕೆಟ್‌ ಕೀಪರ್‌ ರಿಷಭ್ ಪಂತ್ (12ನೇ ಸ್ಥಾನ) ಮುಂದೆ ಇದ್ದಾರೆ. ಬೌಲರ್‌ಗಳ ಕ್ರಮಾಂಕದಲ್ಲಿ ಜಸ್‌ಪ್ರೀತ್ ಬೂಮ್ರಾ ಒಂದು ಸ್ಥಾನ ಜಿಗಿದಿದ್ದು ಒಂಬತ್ತನೇ ಸ್ಥಾನದಲ್ಲಿದ್ದಾರೆ. ಆರ್‌.ಅಶ್ವಿನ್ ಎರಡನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ. ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ ಆರು ವರ್ಷಗಳ ಬಳಿಕ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಭಾರತದ ಎದುರಿನ ಮೂರು ಟೆಸ್ಟ್ ಪಂದ್ಯಗಳಲ್ಲಿ 507 ರನ್‌ ಗಳಿಸಿದ ಹಿನ್ನೆಲೆಯಲ್ಲಿ ಅವರ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡುಬಂದಿದೆ.

× Chat with us