ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಈ ಸಂಬಂಧ ಐಪಿಎಸ್ ಅಧಿಕಾರಿ ಡಿ.ರೂಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
‘ಡಿ. ರೂಪ ಅವರು ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ನಿರ್ಬಂಧ ವಿಧಿಸಬೇಕು’ ಎಂದು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರತಿಬಂಧಕಾದೇಶ ನೀಡಿತ್ತು. ‘ಈ ಆದೇಶ ಏಕಪಕ್ಷೀಯವಾಗಿದೆ‘ ಎಂದು ಆಕ್ಷೇಪಿಸಿ ಪ್ರಶ್ನಿಸಿ ರೂಪಾ ಹೈಕೋರ್ಟ್ ಮೆಟ್ಟಿಲೇರಿದ್ದರು.