ಮೋದಿ ಅವ್ರು ರಾಜೀನಾಮೆ ನೀಡಲಿ: ಎಸ್.ಆರ್.ಹೀರೇಮಠ್ ಆಗ್ರಹ 

ಮೈಸೂರು: ದೇಶದಲ್ಲಿ ರೈತರ ಸಮಸ್ಯೆ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸಲು ಸಂಪೂರ್ಣ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಷ್ಟ್ರೀಯ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯ ಸಂಸ್ಥಾಪಕ‌ ಅಧ್ಯಕ್ಷ ಎಸ್.ಆರ್.ಹೀರೇಮಠ್ ಆಗ್ರಹಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ನ್ಯಾಯಯುತ ಬೇಡಿಕೆಯಾದ ಮಾರಕ ಮೂರು ಕೃಷಿ ಕಾಯಿದೆ ರದ್ದುಗೊಳಿಸಬೇಕು. ಎಂಎಸ್ಪಿ ಅನ್ನು ರದ್ದುಗೊಳಿಸುವುದಿಲ್ಲ ಎಂದು ಲಿಖಿತ ರೂಪದಲ್ಲಿ ನೀಡಬೇಕೆಂದು 7 ತಿಂಗಳಿಂದ ಬೀದಿಯಲ್ಲಿ ಕೂತು ಹೋರಾಟ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕಿವಿ ಕೇಳದ ಕುಳಿತಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಜನರ ಜೀವನವನ್ನು ಕರಾಳ ವ್ಯವಸ್ಥೆಗೆ ಕೊಂಡೊಯ್ದಿದೆ. ಕೆಆರ್‌ಎಸ್ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ವಿರುದ್ಧ ಸ್ಥಳೀಯವಾಗಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದು ಹೇಳಿದರು.

ಬಳ್ಳಾರಿಯ ಗಣಿಗಾರಿಕೆ ವಿರುದ್ಧ ಸ್ಥಳೀಯ ಹೋರಾಟ ನಡೆದ ರೀತಿಯಲ್ಲಿ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ವಿರುದ್ಧ ಬೃಹತ್ ಹೋರಾಟ ನಡೆಯಬೇಕಿದೆ ಎಂದರು.

× Chat with us