ನವದೆಹಲಿ : ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿರುವ ಅರ್ಜಿಗಳು ನಗರಗಳಲ್ಲಿ ನೆಲೆಸಿರುವ ಒಂದು ವರ್ಗದ ಜನರ ಮನಃಸ್ಥಿತಿಯಾಗಿದೆ. ಮದುವೆಗೆ ಮಾನ್ಯತೆ ನೀಡುವುದು ಶಾಸಕಾಂಗದ ಕೆಲಸ. ಹಾಗಾಗಿ, ಇಂತಹ ವಿಚಾರಗಳಲ್ಲಿ ತೀರ್ಪು ನೀಡುವುದರಿಂದ ನ್ಯಾಯಾಲಯವು ಹಿಂದಕ್ಕೆ ಸರಿಯಬೇಕು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಹೇಳಿದೆ.
ಈ ಅರ್ಜಿಗಳು ವಿಚಾರಣೆಗೇ ಅರ್ಹವಲ್ಲ. ಸಾಮಾಜಿಕ ಸ್ವೀಕೃತಿಯನ್ನು ಪಡೆದುಕೊಳ್ಳುವ ಉದ್ದೇಶದಿಂದ ಈ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಕೇಂದ್ರವು ವಾದಿಸಿದೆ.
‘ಗ್ರಾಮೀಣ, ಅರೆ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರ ನಿಲುವುಗಳು, ಧಾರ್ಮಿಕ ನಿಲುವುಗಳು, ವೈಯಕ್ತಿಕ ಕಾನೂನುಗಳು, ಮದುವೆಗೆ ಸಂಬಂಧಿಸಿದ ಪದ್ಧತಿಗಳು, ಇತರ ಕಾನೂನುಗಳ ಮೇಲೆ ಈ ಕಾನೂನು (ಸಲಿಂಗ ವಿವಾಹ ಮಾನ್ಯತೆ) ಬೀರಬಹುದಾದ ಪರಿಣಾಮಗಳ ಕುರಿತು ಶಾಸಕಾಂಗವು ವಿಸ್ತಾರ ನೆಲೆಯಲ್ಲಿ ಚಿಂತಿಸಿ, ಕ್ರಮ ಕೈಗೊಳ್ಳಲಿದೆ’ ಎಂದು ಕೇಂದ್ರ ಹೇಳಿದೆ. ಸರ್ಕಾರವು ಸಲ್ಲಿಸಿದ ಪ್ರಮಾಣಪತ್ರದಲ್ಲಿ ಇದನ್ನು ವಿವರಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ವಿಚಾರಣೆಯು ಮಂಗಳವಾರವೂ ಮುಂದುವರಿಯಲಿದೆ.
ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…
ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…
ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…
ಮೈಸೂರು : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕುಕ್ಕರಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ.ಜ…
ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್ಗೆ ಬಿಗ್ ಟ್ವೀಸ್ಟ್ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್…
ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…