ಚೆನ್ನೈ: ತಮಿಳುನಾಡು ಸಚಿವ ಉದಯನಿಧಿ ಅವರು ಸನಾತನ ಧರ್ಮ ಕುರಿತು ನೀಡಿರುವ ಹೇಳಿಕೆಯನ್ನು ಸಮರ್ಥಿಸಿದ ಡಿಎಂಕೆ ಸಂಸದ ಎ. ರಾಜಾ ಅವರು ‘ಸನಾತನ ಧರ್ಮ’ವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕವನ್ನು ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.
‘ಸನಾತನ ಧರ್ಮ’ದ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಮೃದು ಧೋರಣೆಯನ್ನು ಹೊಂದಿದ್ದವು ಎಂದು ಹೇಳಿದ ರಾಜಾ, “ಸನಾತನ ಮತ್ತು ವಿಶ್ವಕರ್ಮ ಯೋಜನೆ ಬೇರೆ ಬೇರೆ ಅಲ್ಲ, ಎರಡೂ ಒಂದೇ. ಸನಾತನವನ್ನು ಮಲೇರಿಯಾ, ಡೆಂಗ್ಯೂಗೆ ಹೋಲಿಸಿ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಪ್ರತಿಪಾದಿಸುವಾಗ ಉದಯನಿಧಿ ಸ್ಟಾಲಿನ್ ಮೃದು ಧೋರಣೆ ತೋರಿದ್ದರು” ಎಂದು ಹೇಳಿದರು.
“ಆದರೆ ಈ ರೋಗಗಳು ಸಾಮಾಜಿಕ ಕಳಂಕವನ್ನು ಹೊಂದಿಲ್ಲ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಸನಾತನವನ್ನು ಹೆಚ್‌ಐವಿ ಹಾಗೂ ಕುಷ್ಠರೋಗವನ್ನು ಅಸಹ್ಯಕರವಾಗಿ ನೋಡುವ ಹಾಗೆ ನೋಡಬೇಕು” ಎಂದು ರಾಜಾ ಹೇಳಿದ್ದಾರೆ.
ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ನೀವು ಯಾರನ್ನು ಬೇಕಾದರೂ ಕರೆ ತನ್ನಿ ಎಂದು ಸವಾಲು ಹಾಕಿದ ರಾಜಾ, ಅವರು ಯಾವುದೇ ರೀತಿಯ ಆಯುಧಗಳನ್ನು ಹೊಂದಲಿ, ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ನಾನು ದೆಹಲಿಗೆ ಚರ್ಚೆಗೆ ಬರುತ್ತೇನೆ ಎಂದು ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…