Mysore
22
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸನಾತನ ಧರ್ಮ ಮಲೇರಿಯಾ ಇದ್ದಂತೆ : ಎಂ.ಕೆ ಸ್ಟಾಲಿನ್ ಪುತ್ರ ಉದಯನಿಧಿ

ಚೆನ್ನೈ : ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ ಮೂಲಕ ಬಿಜೆಪಿ ನಾಯಕರನ್ನು ತೀವ್ರವಾಗಿ ಟೀಕಿಸಿದ್ದು, ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಸಾಮಾಜಿಕ ಜಾಲಾತಾಣದಲ್ಲಿ ಇವರ ಹೇಳಿಕೆ ಕುರಿತು ಅನೇಕ ಕಾಮೆಂಟ್‌ಗಳು ಬರತೊಡಗಿದ್ದು, ನೆಟ್ಟಿಗರು ತಮಿಳುನಾಡು ಮುಖ್ಯಮಂತ್ರಿಯ ಮಗನ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಬಿಜೆಪಿಯ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್‌ನ ಮಿತ್ರಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನ ಈ ನರಮೇಧದ ಕರೆಗೆ ಬೆಂಬಲವಾಗಿದೆ. INDIA ಒಕ್ಕೂಟಕ್ಕೆ ಒಂದು ಅವಕಾಶವನ್ನು ನೀಡಿದರೆ ಅದು ನಮ್ಮ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಸನಾತನ ಧರ್ಮವನ್ನು ಸರಳವಾಗಿ ವಿರೋಧಿಸಲು ಸಾಧ್ಯವಿಲ್ಲ. ಆದರೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು. ಈ ಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ವಾದಿಸಿದ್ದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ