ಚೆನ್ನೈ : ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ ಮೂಲಕ ಬಿಜೆಪಿ ನಾಯಕರನ್ನು ತೀವ್ರವಾಗಿ ಟೀಕಿಸಿದ್ದು, ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಸಾಮಾಜಿಕ ಜಾಲಾತಾಣದಲ್ಲಿ ಇವರ ಹೇಳಿಕೆ ಕುರಿತು ಅನೇಕ ಕಾಮೆಂಟ್‌ಗಳು ಬರತೊಡಗಿದ್ದು, ನೆಟ್ಟಿಗರು ತಮಿಳುನಾಡು ಮುಖ್ಯಮಂತ್ರಿಯ ಮಗನ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಬಿಜೆಪಿಯ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್‌ನ ಮಿತ್ರಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನ ಈ ನರಮೇಧದ ಕರೆಗೆ ಬೆಂಬಲವಾಗಿದೆ. INDIA ಒಕ್ಕೂಟಕ್ಕೆ ಒಂದು ಅವಕಾಶವನ್ನು ನೀಡಿದರೆ ಅದು ನಮ್ಮ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದು ಕಿಡಿಕಾರಿದ್ದಾರೆ.
ಸನಾತನ ಧರ್ಮವನ್ನು ಸರಳವಾಗಿ ವಿರೋಧಿಸಲು ಸಾಧ್ಯವಿಲ್ಲ. ಆದರೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು. ಈ ಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ವಾದಿಸಿದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…