ಸ್ಯಾಂಡಲ್‌ವುಡ್‌ ನಟಿ ನಿಶ್ಚಿಕಾಗೆ ಕೊರೊನಾ ಪಾಸಿಟಿವ್‌!

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ನಿಶ್ವಿಕಾ ನಾಯ್ಡುಗೆ ಕೊರೊನಾ ಪಾಸಿಟಿವ್ ಆಗಿದೆ.

ಈಗಾಗಲೇ ಆತಂಕ ಸೃಷ್ಟಿಸಿರುವ ಕೊರೊನಾ ಇದೀಗ ಸ್ಯಾಂಡಲ್ ವುಡ್ ಗೂ ಕಾಲಿಟ್ಟಿದೆ. ಡಾರ್ಲಿಂಗ್ ಕೃಷ್ಣ ಜೊತೆಗೆ ದಿಲ್ ಪಸಂದ್, ಪ್ರಜ್ವಲ್‌ ದೇವರಾಜ್‌ ಅವರೊಂದಿಗೆ ʻಜಂಟಲ್‌ಮೆನ್‌ʼ ಚಿತ್ರದಲ್ಲಿ ಅಭಿನಯಿಸಿರುವ ನಟಿ ನಿಶ್ವಿಕಾ ನಾಯ್ಡು ಅವರು, ಗುರು ಶಿಷ್ಯರು, ಯೋಗರಾಜ್ ಭಟ್ಟರ ಗಾಳಿಪಟ-2 ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ.

ಈ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಕೊರೊನಾ ದೃಢಪಟ್ಟಿರುವ ವಿಷಯವನ್ನು ದೃಢಪಡಿಸಿದ್ದಾರೆ.
ಸದ್ಯಕ್ಕೆ ಹೋಂ ಐಸೋಲೇಷನ್ ಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ನಿಶ್ವಿಕಾ ತಿಳಿಸಿದ್ದಾರೆ. ಜತೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.

× Chat with us