ಮಂಡ್ಯ : ಸಕ್ಕರೆ ನಾಡು ಮಂಡ್ಯ ಚುನಾವಣಾ ಅಖಾಡಕ್ಕೆ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮರು ಪ್ರವೇಶ ಮಾಡಲಿದ್ದಾರೆ. ಹಲವು ವರ್ಷಗಳ ಬಳಿಕ ಮಂಡ್ಯ ರಾಜಕೀಯಕ್ಕೆ ಮತ್ತೆ ಕಾಲಿಡುತ್ತಿರುವ ರಮ್ಯಾ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಅವರ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ.
ಮಂಡ್ಯಕ್ಕೆ ಬರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆ ನಾನು ಕಾಂಗ್ರೆಸ್ಸಿನ ವಿಧಾನಸಭಾ ಅಭ್ಯರ್ಥಿಗಳ ಪರವಾಗಿ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ನಾಯಕರೊಂದಿಗೆ ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದೇನೆ. ನಿಮ್ಮೆಲ್ಲರನ್ನೂ ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.
ಮಂಡ್ಯದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ನಡೆಯುವ ಪ್ರಚಾರ ಸಭೆಯಲ್ಲಿ ರಮ್ಯಾ ಭಾಗಿಯಾಗಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ರಮ್ಯಾ ಚೊಚ್ಚಲ ಬಾರಿಗೆ ಸಂಸದೆಯಾಗಿದ್ದರು. ತಮಗೆ ಸಿಕ್ಕ 6 ತಿಂಗಳ ಅವಧಿಯಲ್ಲೇ ಉತ್ತಮ ಕೆಲಸಗಳಿಂದ ಸೈ ಅನಿಸಿಕೊಂಡಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ರಮ್ಯಾ ಸೋಲಿಗೆ ಸ್ವಪಕ್ಷೀಯರೇ ಕಾರಣವಾಗಿದ್ದರು.
ಇದೀಗ ರಮ್ಯಾ ಅವರು ಮಂಡ್ಯ ಚುನಾವಣಾ ಅಖಾಡಕ್ಕೆ ಮರು ಪ್ರವೇಶ ಮಾಡುತ್ತಿರುವುದರಿಂದ ಮಂಡ್ಯದಲ್ಲಿ ಚುನಾವಣಾ ಕಾವು ಇನ್ನಷ್ಟು ಜೋರಾಗಲಿದೆ. ಇನ್ನೊಂದೆಡೆ ಬಿಜೆಪಿ ಪರ ಸಂಸದೆ ಸುಮಲತಾ ಅಂಬರೀಷ್ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…