Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಸಾವರ್ಕರ್‌ ಫೋಟೋ ತೆರವು: ಸಾತ್ಯಕಿ ಕಿಡಿ

ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರ ಭಕ್ತರ ಬಳಗ ಆಯೋಜಿಸಿದ್ದ ವೀರ ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾತ್ಯಕಿ, ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರ ಓಟಿಗಾಗಿ ತುಷ್ಟೀಕರಣ ನೀತಿ ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಾವರ್ಕರ್ ಅವರನ್ನು ಭಗತ್ ಸಿಂಗ್, ಸುಖದೇವ್, ಚಂದ್ರಶೇಖರ್ ಆಜಾದ್ ವೀರ ಎಂದು ಕರೆದಿದ್ದಾರೆ. ಸಾವರ್ಕರ್ ಅವರ ದೇಶಭಕ್ತಿ, ತ್ಯಾಗ ನಾಡಿಗೆ ಗೊತ್ತಿದೆ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!