ರಾಮನಗರ : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಹೊಸೂರು ಗೊಲ್ಲಳ್ಳಿ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಕೌಶಿಕ್(12) ಮೃತ ರ್ದುದೈವಿ. 6ನೇ ತರಗತಿ ಓದುತ್ತಿದ್ದ ಕೌಶಿಕ್, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ನೀರಿನ ಟ್ಯಾಂಕ್ಗೆ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿದು ಈ ದುರ್ಘಟನೆ ನಡೆದಿದೆ. ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿರ ಕೌಶಿಕ್ ಮೃತದೇಹ ಇಡಲಾಗಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿಂದೆ ವಿದ್ಯಾರ್ಥಿಗಳು ಹಲವು ಬಾರಿ ಮನವಿ ಮಾಡಿದ್ದರೂ, ಶಾಲಾ ಮಂಡಳಿ ಮಾತ್ರ ಇದಕ್ಕೆ ಕ್ಯಾರೆ ಎಂದಿರಲಿಲ್ಲ. ಇದೀಗ ಬೆಳಿಗ್ಗೆ ಸ್ನಾನಕ್ಕೆ ತೆರಳಿದಾಗ ಮೈಮೇಲೆ ಗೋಡೆ ಬಿದ್ದಿದೆ. ಇದರಿಂದ ಕೌಶಿಕ್ ತಲೆ ಮೇಲೆ ಬಲವಾದ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ಈ ವೇಳೆ ಕೌಶಿಕ್ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…