22ರಿಂದಲೇ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ!

ಬೆಂಗಳೂರು: ರಾಜ್ಯಾದ್ಯಂತ ಫೆ.22ರಿಂದಲೇ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭವಾಗಲಿವೆ. ಅಲ್ಲದೆ, ಬೆಂಗಳೂರು ನಗರ ಮತ್ತು ಕೇರಳ ಗಡಿ ಭಾಗದಲ್ಲಿ 8ನೇ ತರಗತಿಯಿಂದ ಮೇಲಿನ ತರಗತಿಗಳನ್ನೂ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಭಾಗದಿಂದ ಬರುವ ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಶಿಕ್ಷಕ ಕೋವಿಡ್‌ ಪರೀಕ್ಷೆಗೆ ಒಳಪಡಬೇಕು. ನೆಗಟಿವ್‌ ವರದಿ ಇದ್ದರೆ ಮಾತ್ರ ತರಗತಿಗೆ ಹಾಜರಾಗಲು ಅನುಮತಿ ನೀಡಲಾಗುವುದು. ಆಯಾ ಶಾಲೆಗಳಲ್ಲಿ ಇರುವ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆಯನ್ನು ಅವಲಂಬಿಸಿ, ಪಾಳಿಯಲ್ಲಿ ತರಗತಿ ನಡೆಸಲು ಅವಕಾಶವಿದೆ. ಹಾಜರಾತಿ ಕಡ್ಡಾಯ ಇಲ್ಲ ಎಂದೂ ಅವರು ವಿವರಿಸಿದರು.

× Chat with us