ಕೇರಳ : ದೇಶಾದ್ಯಂತ ಮತ್ತೆ ಕೊರೊನಾದ ಆತಂಕ ಸೃಷ್ಟಿಯಾಗಿದ್ದು, ಕೇರಳದಲ್ಲಿ ಕಳೆಡೆರೆಡು ದಿನಗಳಲ್ಲಿ ೨ ಸಾವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕೇರಳದ ಕಣ್ಣೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.
ನಿನ್ನೆ ಕೊರೊನಾ ಹೊಸತಳಿ ಜೆಎನ್‌೧ಗೆ 80 ವರ್ಷ ವೃದ್ಧ ಸಾವನ್ನಪ್ಪಿದ್ದರು. ಇಂದು ಮತ್ತೊಂದು ಸಾವಾಗಿದ್ದು, ಕಳೆದ ೧೦ ದಿನದಲ್ಲಿ ಮೂರು ಸಾವು ಸಂಭವಿಸಿದೆ.
ಇಲ್ಲಿನ 68 ವರ್ಷದ ಅಬ್ದುಲ್ ಅಜೀಜ್ ಎಂಬ ವೃದ್ಧರೊಬ್ಬರು ಮಾರಕ ವೈರಾಣುವಿಗೆ ಬಲಿಯಾಗಿದ್ದಾರೆ. ಅಧಿಕ ರಕ್ತದೊತ್ತಡದಿಂದ ಬಳಳುತ್ತಿದ್ದ ಅಬ್ದುಲ್ ಅವರನ್ನು ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇರಳದಲ್ಲಿ ಕೊರೊನಾ ವೈರಸ್‌ಗೆ ಇಬ್ಬರು ಬಲಿಯಾದಂತಾಗಿದೆ.
ಒಮಿಕ್ರಾನ್ ಹೊಸ ತಳಿ ಬಿಎ.2.86 ರೂಪಾಂತರ ತಳಿ ಜೆಎನ್1 ಆಗಿದೆ. ಸಾಂಕ್ರಾಮಿಕ ಕಾಯಿಲೆಗಳ ನಡವೆ ಮತ್ತೆ ಕೋವಿಡ್ ಭೀತಿ ಹೆಚ್ಚಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಯಾವೆಲ್ಲಾ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…