ಮಲಪ್ಪುರಂ : ಕೇರಳ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಇಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಕೇರಳ ಪೊಲೀಸರು ಕೂಡ ಪ್ರಕರಣದ ತನಿಖೆಗೆ ವಿಶೇಷ ಪೊಲೀಸ್ ದಳ (ಎಸ್ ಐಟಿ) ರಚನೆ ಮಾಡಿದ್ದಾರೆ.
22 ಮಂದಿಯ ಸಾವಿಗೆ ಕಾರಣವಾದ ಕೇರಳದ ಮಲಪ್ಪುರಂನ ತನೂರ್ ದೋಣಿ ದುರಂತದ ಕುರಿತು ಕೇರಳ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ಅನ್ನು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. “ಅಧಿಕಾರಿಗಳು ಎಲ್ಲಿದ್ದಾರೆ? ಅವರು ಏನು ಮಾಡುತ್ತಿದ್ದರು ಎಂದು ದೋಣಿ ಅಪಘಾತದ ಬಗ್ಗೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ದ ಚಾಟಿ ಬೀಸಿದೆ.
ಅಪಘಾತವು ಆಘಾತಕಾರಿ ಮತ್ತು ಕಾಡುವ ಸಂಗತಿಯಾಗಿದೆ ಮತ್ತು ದುರಂತವನ್ನು ಮರೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಭಾನುವಾರ ರಾತ್ರಿ 7.30ರ ಸುಮಾರಿಗೆ ತನೂರಿನ ತೂವಲ್ತೀರಂ ಕಡಲತೀರದ ಸಮೀಪವಿರುವ ಅಳಿವೆ ಬಳಿ ದೋಣಿ ಮಗುಚಿ ಬಿದ್ದಿದ್ದು, ಜಿಲ್ಲೆಯ ಅಧಿಕಾರಿಗಳ ದುರಂತದಲ್ಲಿ 15 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಎಂಟು ತಿಂಗಳ ಮಗು ಸೇರಿ 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕರು ಸೇರಿದಂತೆ ದೋಣಿಯಲ್ಲಿ 37 ಮಂದಿ ಇದ್ದರು ಎಂದು ಹೇಳಲಾಗಿದೆ.
ತನಿಖೆಗೆ ಎಸ್‌ಐಟಿ ರಚನೆ : ಇನ್ನು ಭಾನುವಾರ ಸಂಜೆ ಮಲಪ್ಪುರಂ ಜಿಲ್ಲೆಯ ತಾನೂರ್ ಪ್ರದೇಶದಲ್ಲಿ 22 ಜನರನ್ನು ಬಲಿತೆಗೆದುಕೊಂಡ ದುರಂತ ದೋಣಿ ದುರಂತದ ತನಿಖೆಗಾಗಿ ಕೇರಳ ಪೊಲೀಸರು ಮಂಗಳವಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರು ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಜಿತ್ ದಾಸ್ ಎಸ್ ಅವರನ್ನು ತಂಡದ ಮುಖ್ಯಸ್ಥರಾಗಿ ವಹಿಸಿ ಆದೇಶ ಹೊರಡಿಸಿದ್ದಾರೆ.
ತನೂರ್ ಡಿವೈಎಸ್ಪಿ ವಿ ವಿ ಬೆನ್ನಿ, ತಾನೂರು ಠಾಣಾಧಿಕಾರಿ ಜೀವನ್ ಜಾರ್ಜ್ ಮತ್ತು ಕೊಂಡೊಟ್ಟಿ ಎಎಸ್ ಪಿ ವಿಜಯ ಭರತ್ ರೆಡ್ಡಿ ವಿಶೇಷ ತನಿಖಾ ತಂಡದ ಇತರ ಸದಸ್ಯರಾಗಿದ್ದಾರೆ. ಉತ್ತರ ವಲಯದ ಐಜಿ ನೀರಜ್ ಕುಮಾರ್ ಗುಪ್ತಾ ಅವರ ನೇರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ ಎಂದು ಅದು ಹೇಳಿದೆ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಡಿಜಿಪಿ ಸೂಚಿಸಿದ್ದಾರೆ.
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…