Mysore
23
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

ಸೆ.29 ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು : ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ಇರಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕನ್ನಡ ಒಕ್ಕೂಟ ಮಾಡುತ್ತಿರುವ ಬಂದ್. ಹೀಗಾಗಿ ಅಖಂಡ ಕರ್ನಾಟ ಬಂದ್ ಇರಲಿದೆ. ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್‌ನ ಯೋಜನೆ ಮಾಡಿದ್ದೇವೆ ಎಂದು ತಿಳಿಸಿದರು.

ಸೋಮವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಸಂಪೂರ್ಣ ತೀರ್ಮಾನಕ್ಕೆ ಬರುತ್ತೇವೆ. ಸೆಪ್ಟೆಂಬರ್ 29ರಂದು ಕನ್ನಡ ಒಕ್ಕೂಟದ ಆಶ್ರಯದಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಾಹಿತಿಗಳು, ವ್ಯಾಪಾರಿಗಳು ಎಲ್ಲರೂ ಇದಕ್ಕೆ ಬೆಂಬಲ ಕೊಡಬೇಕು ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!