ಸಿ.ಡಿ ಪ್ರಕರಣ: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಯುವತಿ ಪೋಷಕರು

ಬೆಂಗಳೂರು: ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣದ ಯುವತಿ ಪೋಷಕರು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಸಮ್ಮುಖದಲ್ಲಿ ಹಾಗೂ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಯುವತಿಯ ತಂದೆ- ತಾಯಿ ಮತ್ತು ಸಹೋದರರ ವಿಚಾರಣೆ ನಡೆಸಲಾಗುತ್ತಿದೆ.

ಪ್ರಕರಣ ಸಂಬಂಧ ಮಾಹಿತಿ ಕಲೆಹಾಕಲು ಎಸ್‌ಐಟಿ ಅಧಿಕಾರಿಗಳು ಯುವತಿ ಪೋಷಕರಿಗೆ ನೋಟಿಸ್‌ ನೀಡಿದ್ದರು. ಅದರಂತೆ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಆಡುಗೋಡಿಯಲ್ಲಿರುವ ಸಿಸಿಬಿಯ ವಿಶೇಷ ವಿಚಾರಣೆ ಕೊಠಡಿಯಲ್ಲಿ, ವಿಚಾರಣೆ ನಡೆಯುತ್ತಿದೆ.

× Chat with us