BREAKING NEWS

ಯಾವುದೇ ಕಾರಣಕ್ಕೂ ‘ಶಕ್ತಿ ಯೋಜನೆ’ ರದ್ದಾಗಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ‘ಶಕ್ತಿ ಯೋಜನೆ’ ರದ್ದಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು, ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಹೇಳಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೂ ಕೂಡ ಈ ವದಂತಿಗಳ ಕುರಿತು ಸ್ಪಷ್ಟನೆ ನೀಡಿದ್ದಾರೆ. ಮುಂದಿನ 10 ವರ್ಷವೂ ಶಕ್ತಿ ಯೋಜನೆ ಮುಂದುವರಿಯಲಿದೆ. ಒಂದು ಪಕ್ಷದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಲ್ಲ. ಮಹಿಳೆಯರು ಪಾಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಲಾಗುತ್ತಿದೆಯ ಈ ಯೋಜನೆಯನ್ನು ಜೂನ್ 11 ರಂದು ಜಾರಿಗೆ ತರಲಾಗಿದೆ.

ಈ ನಡುವೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೂಡ ಸ್ಪಷ್ಟನೆ ನೀಡಿದೆ.

ಶಕ್ತಿಯನ್ನು ಹಿಂತೆಗೆದುಕೊಳ್ಳುವುದಿಲ್ಲ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು. ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ನಿಯಮಿತವಾಗಿ ಮಾಹಿತಿ ನೀಡಲಾಗುವುದು ಎಂದು ಹೇಳಿದೆ.

ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಸ್ವಾತಂತ್ರ್ಯ ದಿನಾಚರಣೆ ಬಳಿಕ ಸ್ಥಗಿತಗೊಳ್ಳಲಿದೆ ಎಂಬ ವದಂತಿಗಳು ಸಾಮಾಜಿಲ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವದಂತಿಯನ್ನು ನಂಬಿದ್ದ ಹಲವರು ಗೊಂದಲಕ್ಕೊಳಗಾಗಿದ್ದರು.

andolanait

Recent Posts

ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದ ಮಡಿಕೇರಿಯ ಯೋಗೇಶ್

ಮಡಿಕೇರಿ: ಮಗನನ್ನು ಕಳೆದುಕೊಳ್ಳುವ ನೋವಿನ ನಡುವೆಯೂ, ಆತನ ಅಂಗಾಂಗಗಳು ಮತ್ತೊಬ್ಬರ ಬದುಕಿಗೆ ಆಸರೆಯಾಗಲಿ ಎಂದು ಕುಟುಂಬವೊಂದು ಮಾನವೀಯ ನಿರ್ಧಾರ ಕೈಗೊಂಡಿದೆ.…

10 hours ago

ಕೇಂದ್ರ ಹಣ ಕೊಟ್ಟರೆ ದರ ಹೆಚ್ಚಿಸಲ್ಲ’; ಬೆಲೆ ಏರಿಕೆ ಅನಿವಾರ್ಯ ಎಂದ ಡಿಸಿಎಂ ಪರಮೇಶ್ವರ್‌!

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್‌, ರಾಜ್ಯ ಸರ್ಕಾರಕ್ಕೆ ಕೆಲವು ದರ ಏರಿಕೆಗಳು ಅನಿವಾರ್ಯವಾಗಿವೆ…

10 hours ago

ಪಿರಿಯಾಪಟ್ಟಣದಲ್ಲಿ ಮಲೆ ಮಹದೇಶ್ವರ ಜಾತ್ರೆಯ ಸಂಭ್ರಮ; ವಿಜೃಂಭಣೆಯ ರಥೋತ್ಸವ!

ಪಿರಿಯಾಪಟ್ಟಣ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.…

11 hours ago

ಹಾಸನಾಂಬೆ ದರ್ಶನಕ್ಕೆ ತೆರೆ; ಗರ್ಭಗುಡಿ ಬಾಗಿಲಿಗೆ ಬೀಗ!

ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ನವೆಂಬರ್‌ 11ರ ಮಧ್ಯಾಹ್ನ ದೇವಾಲಯದ…

13 hours ago

ನಮ್ಮ ವಾಹನಗಳೂ ಹಾನಿಗೊಳಗಾಗಿವೆ’; ಎಥನಾಲ್‌ ಬಳಕೆ ವಿರುದ್ಧ ಸಿಎಂ ಡಿಕೆಶಿ ಆಕ್ರೋಶ!

ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್‌ಗೆ ಎಥನಾಲ್‌ ಮಿಶ್ರಣ…

14 hours ago

ಕೋರ್ಟ್‌ ಸೂಚನೆ ಬೆನ್ನಲ್ಲೇ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ!

ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ಕೋರ್ಟ್‌ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಚಿಕಿತ್ಸೆಗೆ ವ್ಯವಸ್ಥೆ…

14 hours ago