Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಸಂಚಲನ ಮೂಡಿಸಿದ ಶಾಮನೂರು ಶಿವಶಂಕರಪ್ಪ- ಬೊಮ್ಮಾಯಿ ಭೇಟಿ: ಸ್ಪಷ್ಟನೆ ನೀಡಿದ ಮಾಜಿ ಸಿಎಂ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕನ ಜೊತೆ ಭೇಟಿ ಮಾತುಕತೆ ಇಂದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು. ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕೀಯ ವಿಚಾರಗಳೇನು ಇಲ್ಲ, ಇದೊಂದು ಸೌಹಾರ್ದಯುತ ಭೇಟಿಯಷ್ಟೆ ಎಂದು ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೊಟೆಲ್ ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೊಪರಿ ಮಾತನಾಡಿದ್ದು ಬಿಟ್ಟರೆ ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ ಎಂದು ಸ್ಪಷ್ಡಪಡಿಸಿದ್ದಾರೆ.

ಸ್ನೇಹ ಸಂಬಂಧಗಳೇ ಬೇರೆ ರಾಜಕೀಯ ಸಂಬಂಧವೇ ಬೇರೆ ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಹೊಂದಾಣಿಕೆ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಬಿಜೆಪಿಗೆ ಇಂದು ದುರ್ಗತಿ ಬಂದಿದೆ ಎಂದು ಬಿಜೆಪಿಯ ಇಬ್ಬರು ನಾಯಕರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿತ್ತು. ಈ ಮಧ್ಯೆ ಮಂಗಳವಾರ ಮಧ್ಯಾಹ್ನ ದಾವಣಗೆರೆಯಲ್ಲಿ ಬಿಜೆಪಿಯ ಕಾರ್ಯಕಾರಿಣಿ ಸಭೆ ನಡೆದಿತ್ತು. ಅದಾದ ಬಳಿಕ ಸಾಯಂಕಾಲ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರ್ ಶಿವಶಂಕರಪ್ಪ ಅವರನ್ನು ರೆಸಾರ್ಟ್ ವೊಂದರಲ್ಲಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿತ್ತು ಭಾರೀ ಚರ್ಚೆ ಹುಟ್ಟುಹಾಕಿತ್ತು.

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ಅವರು ದಾವಣಗೆರೆ ಹೊರವಲಯದ ಖಾಸಗಿ ರೆಸಾರ್ಟ್?ನಲ್ಲಿ ಭೇಟಿ ಮಾಡಿದ್ದು, 25 ನಿಮಿಷಗಳ ಕಾಲ ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬೊಮ್ಮಾಯಿಯವರು ಮಾತು ಮುಗಿಸಿ ಹೊರಬರುತ್ತಿರುವ ದೃಶ್ಯ ಮಾಧ್ಯಮಗಳಿಗೆ ಲಭ್ಯವಾಗಿದೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ