ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಗುರುವಾರ ಸಂಜೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಈ ವೇಳೆಯಲ್ಲಿ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.
ಕೇಂದ್ರದಲ್ಲಿ ವಿರೋಧ ಪಕ್ಷಗಳ ಒಗ್ಗಟಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮುಂಬರುವ ಸಂಸತ್ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ವಿರೋಧ ಪಕ್ಷಗಳು ಒಂದೇ ವೇದಿಕೆಯಲ್ಲಿ ಒಗ್ಗೂಡಬೇಕು ಎಂಬ ವಿಷಯದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇದೇ ವಿಷಯದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಈ ಬೆನ್ನಲೇ ಶರದ್ ಪವಾರ್ ಅವರು ಖರ್ಗೆ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.
ಶರದ್ ಪವಾರ್ ಇತ್ತೀಚೆಗೆ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರನ್ನು ಬೆಂಬಲಿಸಿ ಮಾತನಾಡಿದ್ದರು. ಜಂಟಿ ಸಂಸದೀಯ ಸಮಿತಿಯ ತನಿಖೆಯ ಬದಲು ಅದಾನಿ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ತನಿಖೆ ಮಾಡಬೇಕು ಎಂದು ಹೇಳಿದ್ದರು.
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…
ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…
ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…