BREAKING NEWS

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶರದ್‌ ಪವಾರ್‌

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಗುರುವಾರ ಸಂಜೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಈ ವೇಳೆಯಲ್ಲಿ ರಾಹುಲ್‌ ಗಾಂಧಿ ಕೂಡ ಉಪಸ್ಥಿತರಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೇಂದ್ರದಲ್ಲಿ ವಿರೋಧ ಪಕ್ಷಗಳ ಒಗ್ಗಟಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮುಂಬರುವ ಸಂಸತ್‌ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ವಿರೋಧ ಪಕ್ಷಗಳು ಒಂದೇ ವೇದಿಕೆಯಲ್ಲಿ ಒಗ್ಗೂಡಬೇಕು ಎಂಬ ವಿಷಯದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇದೇ ವಿಷಯದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಈ ಬೆನ್ನಲೇ ಶರದ್‌ ಪವಾರ್‌ ಅವರು ಖರ್ಗೆ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಶರದ್ ಪವಾರ್ ಇತ್ತೀಚೆಗೆ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರನ್ನು ಬೆಂಬಲಿಸಿ ಮಾತನಾಡಿದ್ದರು. ಜಂಟಿ ಸಂಸದೀಯ ಸಮಿತಿಯ ತನಿಖೆಯ ಬದಲು ಅದಾನಿ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ತನಿಖೆ ಮಾಡಬೇಕು ಎಂದು ಹೇಳಿದ್ದರು.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

8 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

12 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

17 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

17 hours ago