BREAKING NEWS

ಶರದ್ ಪವಾರ್ ಪ್ರತಿಪಕ್ಷಗಳ ಸಭೆಗೆ ಬರುತ್ತಾರೆ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಗೈರಾಗಲಿದ್ದಾರೆ ಎನ್ನುವ ವರದಿಗಳ ನಡುವೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸ್ಪಷ್ಟನೆ ನೀಡಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಜುಲೈ 18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದಿದ್ದಾರೆ.

ಸೋಮವಾರದ ವಿಪಕ್ಷಗಳ ಸಭೆಗೆ ಪವಾರ್ ಗೈರಾಗಿ, ಮಂಗಳವಾರ ಪಾಲ್ಗೊಳ್ಳಲಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ವಿರೋಧ ಪಕ್ಷಗಳ ಅಧಿಕೃತ ಸಭೆ ಮಂಗಳವಾರ ನಡೆಯಲಿದೆ. ಆದರೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಂದು ಕೇವಲ ಔತಣಕೂಟವನ್ನು ಆಯೋಜಿಸುತ್ತಿದ್ದಾರೆ ಎಂದು ಹೇಳಿದರು.

ಮಾದ್ಯಮದವರೊಂದಿಗಿನ ಸಂವಾದದ ವೇಳೆ ಪವಾರ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ನಾನು ಹಿಂದಿನ ದಿನ ಪವಾರ್ ಜೊತೆ ಮಾತನಾಡಿದ್ದೇನೆ. ಇಂದು ಅಲ್ಲಿ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿದೆ ಮತ್ತು ಅವರು ಇಂದು ಅಲ್ಲಿರಲು ಬಯಸುತ್ತಾರೆ. ಆದರೆ, ನಾಳೆ ಸಭೆಗೆ ಹಾಜರಾಗಲಿದ್ದಾರೆ. ಅವರು ಬರುವುದು ಮುಖ್ಯವಾಗಿದ್ದು, ಅವರನ್ನು ಕರೆದಿದ್ದೇನೆ. ಹೀಗಾಗಿ, ಅವರು ಜುಲೈ 18 ರಂದು ಬೆಳಿಗ್ಗೆ ಬರುವುದಾಗಿ ಹೇಳಿದ್ದಾರೆ ಎಂದು ಹೇಳಿದರು.

ಯಾವುದೇ ತೊಂದರೆ ಇಲ್ಲ, ಎಲ್ಲರೂ ಬರುತ್ತಿದ್ದಾರೆ. ಮಮತಾ ಜಿ ಬರುತ್ತಿದ್ದಾರೆ, ಕೇಜ್ರಿವಾಲ್ ಜಿ ಬರುತ್ತಿದ್ದಾರೆ. ನಿತೀಶ್ ಜಿ, ತೇಜಸ್ವಿ ಜಿ, ಸ್ಟಾಲಿನ್ ಜಿ ಬರುತ್ತಿದ್ದಾರೆ. ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದವರಿಗಿಂತ ಹೆಚ್ಚು ಜನರು ನಮ್ಮೊಂದಿಗೆ ಸೇರುತ್ತಿದ್ದಾರೆ ಎಂದು ತಿಳಿಸಿದರು.

 

lokesh

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago