ರಾಜೀನಾಮೆ ಹಿಂಪಡೆಯುವುದಾಗಿ ಘೋಷಿಸಿದ ಶಿಲ್ಪಾ ನಾಗ್

ಮೈಸೂರು: ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿದ್ದ ಶಿಲ್ಪಾ ನಾಗ್‌ ಅವರು ತಮ್ಮ ರಾಜೀನಾಮೆಯನ್ನು ವಾಪಸ್‌ ತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.

ʻನಾನು ನನ್ನ ರಾಜೀನಾಮೆಯನ್ನು ವಾಪಸ್‌ ಪಡೆಯುತ್ತೇನೆʼ ಎಂದು ನಿರ್ಗಮಿತ ನಗರಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ತಿಳಿಸಿದ್ದಾರೆ.

ಇ-ಮೇಲ್‌ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಶಿಲ್ಪಾ ನಾಗ್‌ ಅವರು ರಾಜೀನಾಮೆ ಸಲ್ಲಿಸಿದ್ದರು.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಡಳಿತದಲ್ಲಿ ಹಸ್ತಕ್ಷೇಪ, ಒತ್ತಡದ ದೂರನ್ನು ನೀಡಿ ಶಿಲ್ಪಾ ನಾಗ್‌ ರಾಜೀನಾಮೆ ನೀಡಿದ್ದರು.

× Chat with us