Mysore
26
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಶಿವಮೊಗ್ಗ: ‘ಮುಸ್ಲಿಂ 2 ‘ಬಿ’ ಮೀಸಲಾತಿ ಪುನರ್ ಸ್ಥಾಪಿಸಿ’: ಪ್ರತಿಭಟನೆ

ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ, ಮಂಗಳವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

‘ಈ ಹಿಂದಿನ ಸರ್ಕಾರಗಳು ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗ ಎಂದು ವರದಿ ನೀಡಿದ್ದವು. ಅದರ ಅನ್ವಯ ಸಂವಿಧಾನದ ಅಡಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಬೇಕು ಎನ್ನುವ ನಿಯಮವಿದೆ. ಆದರೆ ಮುಸ್ಲಿಮರು ಎನ್ನುವ ಕಾರಣಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಇರಿಸಿದ್ದ ಶೇ 4 ರಷ್ಟು ಮೀಸಲಾತಿಯನ್ನು ಮೊಟಕುಗೊಳಿಸುವ ಮೂಲಕ ಕೋಮುವಾದಿತನ ತೋರಿದೆ’ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಇಮ್ರಾನ್ ಆರೋಪಿಸಿದರು.

ಸಮುದಾಯದ ಸಬಲೀಕರಣಕ್ಕೆ ಸಹಕರಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು. ಇರ್ಫಾನ್, ಜಬೀವುಲ್ಲಾ ಇದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ