ಮಂಗಳೂರು: ಕರಾವಳಿ ನಗರ ಮಂಗಳೂರಿಗೆ ವೇದ ಚಿತ್ರದ ಪ್ರಮೋಶನ್ ಗಾಗಿ ಆಗಮಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಿತ್ರ ತಂಡದ ಸಹಿತ ಇಲ್ಲಿನ ಪ್ರಸಿದ್ಧ ಕೊರಗಜ್ಜನ ಕ್ಷೇತ್ರ ಕುತ್ತಾರುಗೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮಂಗಳೂರಿನ ಕುತ್ತಾರು ಬಳಿ ಇರುವ ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಗೀತಾ ಹಾಗೂ ಮಗಳೊಂದಿಗೆ ಭೇಟಿ ನೀಡಿದ ಶಿವರಾಜ್ ಕುಮಾರ್ ಕೊರಗಜ್ಜ ದೈವಕ್ಕೆ ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ವೇದ ಚಿತ್ರತಂಡದ ಸದಸ್ಯರೂ ಪ್ರಾರ್ಥನೆಯಲ್ಲಿ ಭಾಗಿಯಾದರು.
ಕೊರಗಜ್ಜ ದೈವ ಈಗ ಕರ್ನಾಟಕದಾದ್ಯಂತ ಪ್ರಸಿದ್ಧವಾಗುತ್ತಿದೆ. ಬೆಂಗಳೂರು, ಮೈಸೂರಿನಲ್ಲೂ ಕೊರಗಜ್ಜನ ಕಟ್ಟೆ ಕಟ್ಟಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ವೇದ ಚಿತ್ರದ ಪ್ರಮೋಷನ್ ಗಾಗಿ ಶಿವರಾಜ್ ಕುಮಾರ್ ಹಾಗೂ ಚಿತ್ರತಂಡ ಮಂಗಳೂರಿಗೆ ಆಗಮಿಸಿದ್ದಾರೆ. ಪಣಂಬೂರು ಕಡಲಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ಎರ್ಪಡಿಸಲಾಗಿದೆ.
ಕುತ್ತಾರು ಕೊರಗಜ್ಜನ ದೈವಸ್ಥಾನ ಅತ್ಯಂತ ಕಾರಣಿಕ ಸ್ಥಳವಾಗಿದ್ದು ಇಲ್ಲಿ ಬಹಳಷ್ಟು ರೀತಿಯ ಸೇವೆಗಳು ನಡೆಯುತ್ತವೆ. ಇಲ್ಲಿ ಭಕ್ತರು ಅಂದುಕೊಂಡಿದ್ದು ನಡೆಯುವ ಪ್ರತೀತಿ ಇದೆ. ದೈವ ಸ್ಥಾನಕ್ಕೆ ನಿತ್ಯ ನೂರಾರು ಮಂದಿ ಭೇಟಿ ಕೊಡುತ್ತಾರೆ. ವಿವಾಹ, ಆರೋಗ್ಯ, ದಾಂಪತ್ಯ, ವಿದ್ಯಾಭ್ಯಾಸ ಸೇರಿದಂತೆ ವಿವಿಧ ಕಾರಣಗಳಿಗೆ ಹರಕೆ ಹೇಳುವ ಜನರು ಇಲ್ಲಿ ಬಂದು ಸೇವೆ ಸಲ್ಲಿಸಿ ಹೋಗುತ್ತಾರೆ.
ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…
ಬೆಂಗಳೂರು : "ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು…
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…