ಇಂದು ಸಂಜೆ ಕೇಂದ್ರ ಸಂಪುಟ ಪುನರ್‌ರಚನೆ: ಶೋಭಾ ಕರಂದ್ಲಾಜೆ, ನಾರಾಯಣ ಸ್ವಾಮಿಗೆ ಸ್ಥಾನ!

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆ ಇಂದು ಸಂಜೆ ಆಗಲಿದ್ದು, ಸಂಭಾವ್ಯರ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಸಚಿವ ಸಂಪುಟದಲ್ಲಿ ಕರ್ನಾಟಕದಿಂದ ಇಬ್ಬರಿಗೆ ಸ್ಥಾನ ಸಿಗುವುದು ಖಚಿತವಾಗಿದ್ದು, ಶೋಭಾ ಕರಂದ್ಲಾಜೆ ಹಾಗೂ ನಾರಾಯಣ ಸ್ವಾಮಿ ಅವರ ಹೆಸರು ಖಚಿತವೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಉಳಿದ ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ: ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೋವಾಲ್, ಪಶುಪತಿನಾಥ್ ಪಾರಸ್, ನಾರಾಯಣ ರಾಣೆ, ಭೂಪೇಂದ್ರ ಯಾದವ್, ಅನುಪ್ರಿಯಾ ಪಟೇಲ್, ಕಪಿಲ್ ಪಾಟೀಲ್, ಮೀನಾಕ್ಷಿ ಲೇಖಿ, ರಾಹುಲ್ ಕಸಾವಾ, ಅಶ್ವಿನಿ ವೈಷ್ಣವ್, ಶಾಂತನು ಠಾಕೂರ್, ವಿನೋದ್ ಸೋನ್‌ಕರ್, ಪಂಕಜ್ ಚೌಧರಿ, ಆರ್‌ಸಿಪಿ ಸಿಂಗ್, ದಿಲೇಶ್ವರ್ ಕಾಮತ್, ಚಂದ್ರೇಶ್ವರ್ ಪ್ರಸಾದ್ ಚಂದ್ರವಂಶಿ, ರಾಮನಾಥ್ ಠಾಕೂರ್, ರಾಜ್‌ಕುಮಾರ್ ರಂಜನ್, ಬಿ.ಎಲ್​.ವರ್ಮಾ, ಅಜಯ್ ಮಿಶ್ರಾ, ಹೀನಾ ಗಾವಿತ್, ಅಜಯ್ ಭಟ್ಟ, ಪ್ರೀತಂ ಮುಂಡೆ ಹೆಸರು ಸಂಭಾವ್ಯ ಕೇಂದ್ರ ಸಚಿವರ ಪಟ್ಟಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

× Chat with us