BREAKING NEWS

ಬಾಲಿವುಡ್‌ ಭಾಯ್‌ ಜಾನ್‌ ಮನೆ ಮುಂಭಾಗ ಗುಂಡಿನ ದಾಳಿ !

ಮುಂಬೈ : ಮುಂಜಾನೆ 5ಗಂಟೆ  ಸುಮಾರಿಗೆ ಬಾಂದ್ರಾದಲ್ಲಿರುವ ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ನಿವಾಸದ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ.

ಇಬ್ಬರೂ ಶೂಟರ್ ಗಳು ಬೈಕ್ ನಲ್ಲಿ ಬಂದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ.
ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ.

ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಮುಂಬೈ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಶುರು ಮಾಡಿದ್ದಾರೆ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

22 mins ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

52 mins ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

1 hour ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

1 hour ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

2 hours ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

3 hours ago