ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಈ ವಿಷಯದ ಮೇಲೆ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಮಂಗಳವಾರ ದಾಖಲಿಸಿಕೊಂಡಿದೆ.
ಕಲಾಪ ಆರಂಭವಾಗುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ವೈದ್ಯರು, ತಂತ್ರಜ್ಞರು ಮತ್ತು ವಿವಿಧ ಸಿಬ್ಬಂದಿ ಸೇರಿದಂತೆ 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತು ಅಕ್ಟೋಬರ್ 16 ರಂದು ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ವರದಿಯನ್ನು ಉಲ್ಲೇಖಿಸಿದರು.
ನಂತರ, ಈ ಸುದ್ದಿ ವರದಿಯ ಆಧಾರದ ಮೇಲೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನೋಂದಾಯಿಸಲು ಮತ್ತು ಅದನ್ನು ನ್ಯಾಯಾಲಯದ ಮುಂದೆ ಇಡುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸೂಚಿಸಲಾಯಿತು.
ರಾಜ್ಯದಲ್ಲಿ ಗ್ರಾಮೀಣ ಭಾಗದ 454 ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಇದಲ್ಲದೆ, ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ದಾದಿಯರು, 1,517 ಲ್ಯಾಬ್ ತಂತ್ರಜ್ಞರು, 1,517 ಫಾರ್ಮಸಿ ಸಿಬ್ಬಂದಿ, 1,752 ಸಹಾಯಕ ಸಿಬ್ಬಂದಿ ಮತ್ತು 3,253 ಗ್ರೂಪ್ ಡಿ ನೌಕರರು ಸೇರಿ ಹಲವು ಸಿಬ್ಬಂದಿ ಕೊರತೆಯಿದೆ ಎಂದು ವರದಿ ಪ್ರಕಟವಾಗಿರುವುದನ್ನು ಹೈಕೋರ್ಟ್ ಪೀಠ ಗಮನಿಸಿತು.
ಇದರಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದ್ದು, ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಮುಂದಾಯಿತು. ಈ ವಿಚಾರದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ವಕೀಲ ಶ್ರೀಧರ್ ಪ್ರಭು ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಿಸಲಾಗಿದೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…