ನವದೆಹಲಿ : ವಿಮಾನ ನಿಲ್ದಾಣವೊಂದರಲ್ಲಿ ಹಾಗೂ ಆಗಿನ ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್ ಅವರು ಪ್ರಯಾಣಿಸುತ್ತಿದ್ದ ವಿಮಾನವೊಂದರಲ್ಲಿ 2018ರಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದ ಸಂಶೋಧನಾ ವಿದ್ವಾಂಸೆಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.
“ಫ್ಯಾಸಿಸ್ಟ್ ಬಿಜೆಪಿ ಡೌನ್” ಎಂಬ ಘೋಷಣೆ ಕೂಗುವುದು ಅಪರಾಧವಲ್ಲ ಹಾಗೂ ಇದು ಕ್ಷುಲ್ಲಕ ವಿಚಾರ ಎಂದು ನ್ಯಾಯಾಲಯ ಹೇಳಿದೆ.
ಆರೋಪಿ ಲೂಯಿಸ್ ಸೋಫಿಯಾ ಓರ್ವ ಸಂಶೋಧನಾ ವಿದ್ವಾಂಸೆಯಾಗಿದ್ದು ತೂತುಕುಡಿ ವಿಮಾನ ನಿಲ್ದಾಣದಲ್ಲಿ ಹಾಗೂ ನಂತರ ಈಗಿನ ಪುದುಚ್ಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿರುವ ತಮಿಳಿಸೈ ಅವರಿದ್ದ ವಿಮಾನದಲ್ಲಿ ಘೋಷಣೆ ಕೂಗಿದ್ದರು. ಸೋಫಿಯಾರನ್ನು ನಂತರ ಬಂಧಿಸಲಾಯಿತಾದರೂ ಮರುದಿನ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.
2019ರಲ್ಲಿ ಸೋಫಿಯಾ ಅವರು ನ್ಯಾಯಾಲಯದ ಕದ ತಟ್ಟಿ ತಮ್ಮ ವಿರುದ್ಧ ತೂತುಕುಡಿ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಗೊಳಿಸಬೇಕೆಂದು ಕೋರಿದ್ದರು.
ಸೆಕ್ಷನ್ 290 ಅಡಿ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಕೃತ್ಯವನ್ನೇನೂ ಸೋಫಿಯಾ ನಡೆಸಿಲ್ಲ ಎಂದು ಜಸ್ಟಿಸ್ ಪಿ ಧನಬಲ್ ಅವರಿರುವ ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಹೇಳಿದೆ.
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…