Mysore
23
overcast clouds
Light
Dark

Loksabha Election Results 2024: ಹಾಸನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು

ಹಾಸನ: ಇಂದು ( ಜೂನ್‌ 4 ) ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಜಯ ಗಳಿಸಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ವಿವಾದದ ನಡುವೆಯೇ ಸಂಸದ ಸ್ಥಾನದಿಂದ ಕೆಳಗಿಳಿಯುವ ಪರಿಸ್ಥಿತಿ ಬಂದೊದಗಿದೆ. ಈ ಮೂಲಕ ಕಾಂಗ್ರೆಸ್‌ ಬರೋಬ್ಬರಿ 25 ವರ್ಷಗಳ ಬಳಿಕ ಹಾಸನದಲ್ಲಿ ಸಿಂಹಾಸನ  ಏರಿದೆ.

ಕಾಂಗ್ರೆಸ್‌ ಅಭ್ಯರ್ಥಿ ಅವರು ಈವರೆಗೆ 599832 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ 567886 ಮತ ಪಡೆದು ಹಿನ್ನಡೆ ಸಾಧಿಸುವ ಮೂಲಕ ಸೋಲು ಕಂಡಿದ್ದಾರೆ. ಈ ಇಬ್ಬರ ನಡುವಿನ ಅಂತರ 567886 ಮತಗಳಾಗಿವೆ.