BREAKING NEWS

ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಯಾಗಿ ಡಿಕೆಶಿ ಪ್ರಮಾಣವಚನ

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ದರಾಮಯ್ಯ ಅವರು ಹಾಗೂ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

10 ಮಂದಿ ಪ್ರಮಾಣವಚನ : ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪದಗ್ರಹಣ ಸಮಾರಂಭಕ್ಕೆ ದೇಶದ ಹಲವು ಗಣ್ಯರಿಗೆ ಆಹ್ವಾನ :  ಇನ್ನು ಪದಗ್ರಹಣ ಸಮಾರಂಭಕ್ಕೆ ದೇಶದ ವಿವಿಧ ರಾಜ್ಯದ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ನಾಯಕರನ್ನು ಆಹ್ವಾನಿಸಲಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪುದುಚೆರಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

lokesh

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago