ಸೈಯದ್‌ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ಮೈಸೂರು: ಸೈಯದ್‌ ಇಸಾಕ್‌ ಅವರ ಸಾರ್ವಜನಿಕ ಗ್ರಂಥಾಲಯಕ್ಕೆ ಬೆಂಕಿ ಇಟ್ಟು ಸಾವಿರಾರು ಪುಸ್ತಕಗಳನ್ನು ನಾಶ ಮಾಡಿದ ದುಷ್ಕರ್ಮಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿರುವ ಅವರು, ʻಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕುʼ ಎಂದು ಒತ್ತಾಯಿಸಿದ್ದಾರೆ.

ಸೈಯದ್‌ ಅವರ ಪರವಾಗಿ ಮಾಜಿ ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ನಾಗೇಶ್‌ ದನಿ ಎತ್ತಿದ್ದಾರೆ.

× Chat with us