BREAKING NEWS

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಪ್ರಮಾಣವಚನ ಬೆನ್ನಲ್ಲೇ ಅಸಮಾಧಾನ : ಏನಂದ್ರು ಮಧು ಬಂಗಾರಪ್ಪ?

ಬೆಂಗಳೂರು : ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಹೊಗೆಯಾಡಲು ಆರಂಭವಾಗಿದೆ. ಪ್ರಮಾಣವಚನ ಕಾರ್ಯಕ್ರಮದಿಂದ ದೂರ ಉಳಿದ ಮಧು ಬಂಗಾರಪ್ಪ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರವಷ್ಟೇ ಅವರಿಗೆ, ‘ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿ’ ಎಂದು ಕೈ ನಾಯಕರು ಸೂಚನೆ ಕೊಟ್ಟಿದ್ದರು ಎನ್ನಲಾಗಿದೆ. ಆದರೆ, ಬೆಳಿಗ್ಗೆ ಪಟ್ಟಿಯಲ್ಲಿ ಹೆಸರು ಇರಲಿಲ್ಲ.ಹೀಗಾಗಿ ಮಧು ಬಂಗಾರಪ್ಪ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದಾರೆ. ನಾಯಕರಿಂದ ಸೂಕ್ತ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ ಪ್ರಮಾಣವಚನ ಸಮಾರಂಭದಿಂದ ದೂರ ಉಳಿದಿದ್ದಾರೆ.

ಮಲೆನಾಡಿನಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಕೊಡುಗೆ ಇದೆ. ಒಬಿಸಿ ಸೆಲ್ ಮುಖ್ಯಸ್ಥರಾಗಿ ಕೆಲಸ ಮಾಡಿದ್ದೇನೆ. ಸಮುದಾಯ ಕಾಂಗ್ರೆಸ್ ಕೈ ಹಿಡಿದಿದೆ. ಆದರೂ ಸಚಿವ ಸ್ಥಾನ ನೀಡಲ್ಲ ಎಂದು ಅವರು ಆಪ್ತರ ಬಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ ನಡೆಯಿತು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಾತ್ರವಲ್ಲದೆ, ಡಾ. ಜಿ ಪರಮೇಶ್ವರ, ಕೆಹೆಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಬಿಝಡ್ ಜಮೀರ್ ಅಹ್ಮದ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

lokesh

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago