ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದರು. ಈ ಬಗ್ಗೆ ಆತಂಕಿತರಾದ ಅಭಿಮಾನಿಗಳಿಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಭಯಪಡುವ ಅಗತ್ಯ ಇಲ್ಲ ಎನ್ನುವುದನ್ನು ವಿವರಿಸಿದ್ದಾರೆ.
ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು. ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್ , ನೀರು ಕುಡಿಸಿದ್ದಾರೆ.
ಇದೀಗ ಸಿದ್ದರಾಮಯ್ಯ ಈ ಘಟನೆ ಬಗ್ಗೆ ಟ್ವೀಟ್ ಮಾಡಿದ್ದು “ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ” ಎಂದು ಬರೆದುಕೊಂಡಿದ್ದಾರೆ.
https://twitter.com/siddaramaiah/status/1652210201829801984?t=yGoknktQtFyESwYrfW9LzQ&s=08
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…