ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ.
ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ. ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪಿಸಿದರು.
ಸಿದ್ದರಾಮಯ್ಯನವರ ಆಡಳಿತದಲ್ಲಿ ಶಿಕ್ಷಕರ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ, ರೀಡೂ ಮುಂತಾದಂತಹ ಹಗರಣಗಳು ನಡೆದಿವೆ. . 843 ಎಕರೆ ಭೂಮಿಯನ್ನು ಅಕ್ರಮವಾಗಿ ಸಾಹುಕಾರರಿಗೆ ಬಿಟ್ಟುಕೊಟ್ಟು 8 ಸಾವಿರ ಕೋಟಿ ರೂ. ಹಗರಣವನ್ನು ಯಾರಾದರೂ ಮಾಡಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡಿ, ಕಾಂಗ್ರೆಸ್ ಎಂದರೆ ಅನ್ಯಾಯ, ಭ್ರಷ್ಟಾಚಾರ, ಅನೀತಿ, ಅಧರ್ಮ. ಈ ಅನಿಷ್ಟ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಕರ್ನಾಟಕದ ಆಡಳಿತದಿಂದ ದೂರವಿಡಬೇಕಾಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಮಾಡಬೇಕಾಗಿದೆ. ಕಾಂಗ್ರೆಸ್ ಎಂಬ ಹೆಸರನ್ನು ಶಾಶ್ವತವಾಗಿ ಈ ನೆಲದಿಂದ ಕಿತ್ತು ಹಾಕಬೇಕಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್‌ನವರು ಗ್ಯಾರಂಟಿ ಕಾರ್ಡ್ ಅನ್ನು ಕೊಟ್ಟಿದ್ದಾರೆ. ಅದಕ್ಕೆ ಯಾವುದೇ ಜೀವ ಇಲ್ಲ. ಅದನ್ನು ತೆಗೆದುಕೊಂಡು ಉಪ್ಪಿನಕಾಯಿ ಹಾಕಬೇಕು ಅಷ್ಟೇ ಬಿಟ್ಟರೆ, ಅದರಿಂದ ಬೇರೆ ಯಾವುದೇ ಉಪಯೋಗವಿಲ್ಲ. ಚುನಾವಣೆ ಮುಗಿಯುವವರೆಗೂ ಅದು ಗ್ಯಾರಂಟಿ, ಚುನಾವಣೆ ಮುಗಿದ ನಂತರ ಅದು ಗಳಗಂಟಿ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಸಿದ್ದರಾಮಯ್ಯ ಅವರ ಲಿಂಗಾಯತರ ಕುರಿತ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಮಾಜಿ ಸಿಎಂ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಇಡೀ ಲಿಂಗಾಯತ ಸಮುದಾಯವೇ ಭ್ರಷ್ಟವಾಗಿದೆ ಎಂದು ಹೇಳಿರುವ ಅವರು, ಈ ಹಿಂದೆ ಬ್ರಾಹ್ಮಣ ಸಮುದಾಯವನ್ನು ಅಪಹಾಸ್ಯ ಮಾಡಿದ್ದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಲಿಂಗಾಯತ-ವೀರಶೈವ ಸಮಾಜ ಒಡೆಯಲು ಯತ್ನಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಜನತೆ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸುತ್ತಾರೆಂದು ಹೇಳಿದರು.
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…
ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…
ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್…
ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್…